ಬೆಂಗಳೂರು, (ಆಗಸ್ಟ್ 19): ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರ ಅನುಮತಿ ವಿರುದ್ಧ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್, ಆಗಸ್ಟ್ 29ಕ್ಕೆ ಮುಂದೂಡಿದೆ. ಸಿಎಂ ಪರ ವಕೀಲರು ಇಂದು (ಆಗಸ್ಟ್ 19) ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಪೀಠ, ಆಗಸ್ಟ್ 29ಕ್ಕೆ ಅರ್ಜಿ ವಿಚಾರಣೆ ಮುಂದೂಡಿದೆ. ಅಲ್ಲದೇ ಜನಪ್ರತಿನಿಧಿಗಳ ಕೋರ್ಟ್ನ ಆದೇಶವನ್ನು ಆ.29ಕ್ಕೆ ಮುಂದೂಡುವಂತೆ ಸೂಚಿಸಿದೆ,. ಈ ಮೂಲಕ ಸಿದ್ದರಾಮಯ್ಯ ನಾಳಿನ ಬೀಸುವ ದೊಣ್ಣೆಯಿಂದ ಪಾರಾದಂತಾಗಿದೆ.