ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಮೈಸೂರು ದಸರಾ ಗಜಪಡೆಗೆ 1 ಕೋಟಿ ರೂ.ಗೂ ಅಧಿಕ ಮೊತ್ತದ ವಿಮೆ ಸೌಲಭ್ಯ
ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಪ್ರಾರಂಭವಾಗಿದ್ದು, ಕ್ಯಾಪ್ಟನ್ ಅಭಿಮನ್ಯು ನೇತೃತ್ವದ 9 ಆನೆಗಳು ಇಂದು ಮೈಸೂರಿಗೆ ಆಗಮಿಸಲಿದೆ. ಈ ನಡುವೆ ಅರಣ್ಯ ಇಲಾಖೆಯು ಗಜಪಡೆ, ಸಿಬ್ಬಂದಿ ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 1 ಕೋಟಿ ರೂ.ಗೂ ಹೆಚ್ಚು ಮೊತ್ತದ ವಿಮೆ ಮಾಡಿಸಿದೆ.
ಗಜಪಡೆಗೆ 87,50,000 ರೂ. ಮೊತ್ತದ ವಿಮೆ ಮಾಡಿಸಲಾಗಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ 1 ಕೋಟಿ ರೂಪಾಯಿ, ಸಾರ್ವಜನಿಕರು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿಗಳಿಗೆ 50 ಲಕ್ಷ ರೂ. ಮೊತ್ತದ ವಿಮೆ ಮಾಡಿಸಲಾಗಿದೆ. ಇದಕ್ಕಾಗಿ ವಿಮಾ ಕಂಪನಿಗೆ ಪ್ರೀಮಿಯಂ ಹಣವನ್ನು ಪಾವತಿಸಲಾಗಿದೆ.
ಆಗಸ್ಟ್ 21ರಿಂದ ಆರಂಭವಾಗಿ ದಸರಾ ಮಹೋತ್ಸವ ಮುಕ್ತಾಯಗೊಂಡು ಗಜಪಡೆ ಕಾಡು ಸೇರುವವರೆಗೂ ಈ ವಿಮೆ ಚಾಲ್ತಿಯಲ್ಲಿರುತ್ತದೆ. ನಾಲ್ಕು ಮೀಸಲು ಆನೆಗಳು ಸೇರಿ ಒಟ್ಟು 18 ಆನೆಗಳಿಗೆ 87,50,000 ವಿಮೆ ಮಾಡಿಸಲಾಗಿದೆ. ಅರಣ್ಯಧಿಕಾರಿಗಳು, ಮಾವುತರು, ಕಾವಾಡಿಗಳಿಗೆ ತಲಾ 2 ಲಕ್ಷದಂತೆ 50 ಜನರಿಗೆ 1 ಕೋಟಿ ವಿಮೆಯನ್ನು ಅರಣ್ಯ ಇಲಾಖೆ ಮಾಡಿಸಿದೆ.
ಗಜಪಡೆಗೆ ನಾಡಿಗೆ ಬಂದ ವೇಳೆಯಲ್ಲಿ ತಾಲೀಮು ಅಥವಾ ಇನ್ನಿತರ ಸಂಧರ್ಭದಲ್ಲಿ ಗಜಪಡೆಯಿಂದ ಸಾರ್ವಜನಿಕರಿಗೆ ಅಥವಾ ಸಾರ್ವಜನಿಕ ಆಸ್ತಿಗೆ ಹಾನಿಯಾದರೆ 50 ಲಕ್ಷ ರೂಪಾಯಿ ವರೆಗೆ ವಿಮೆ ಸೌಲಭ್ಯ ಸಿಗಲಿದೆ. ಒಟ್ಟು 2,37,50,000 ಕೋಟಿ ರೂಪಾಯಿ ಮೊತ್ತದ ವಿಮೆ ಸೌಲಭ್ಯ ಕಲ್ಪಿಸಲಾಗಿದೆ.