ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಶಿವಮೊಗ್ಗ: ಎಸ್ಎಲ್​ವಿ ಅಯ್ಯಂಗಾರ್ ಬೇಕರಿಯಲ್ಲಿ ಕೆಲವೇ ನಿಮಿಷದಲ್ಲಿ 3 ಬಾರಿ ಸ್ಫೋಟ

ಶಿವಮೊಗ್ಗ, ಆ.21: ಬೇಕರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಎಲ್​ಪಿಜಿ ಸಿಲಿಂಡರ್ ಸ್ಫೋಟವಾದ ಘಟನೆ ಶಿವಮೊಗ್ಗ ತಾಲೂಕಿನ ಆಯನೂರಿನ ಎಸ್​ಎಲ್​ವಿ ಅಯ್ಯಂಗಾರ್ ಬೇಕರಿಯಲ್ಲಿ ನಡೆದಿದೆ. ಕೆಲವೇ ನಿಮಿಷದಲ್ಲಿ 3 ಬಾರಿ ಸ್ಫೋಟವಾಗಿದ್ದು, ಬೇಕರಿಯಲ್ಲಿದ್ದ ಎಲ್ಲಾ ವಸ್ತುಗಳು ಬೆಂಕಿಗಾಹುತಿಯಾಗಿದೆ. ಅದೃಷ್ಟವಶಾತ್​ ಘಟನೆಯಲ್ಲಿ ಯಾವುದೇ ಸಾವು-ನೋವು ಸಂಭವಿಸಿಲ್ಲ. ಈ ಕುರಿತು ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ತಪ್ಪಿದ ದೊಡ್ಡ ದುರಂತ

ಆಕಸ್ಮಿಕ ಬೆಂಕಿ ಹೊತ್ತಿಕೊಂಡು ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದ್ದು, ಘಟನೆಯಲ್ಲಿ ಬೇಕರಿಯಲ್ಲಿದ್ದ ಎಲ್ಲ ವಸ್ತುಗಳು ಬೆಂಕಿಗಾಹುತಿಯಾಗಿದ್ದು, ಬೇಕರಿ ಮಾಲೀಕನಿಗೆ ಲಕ್ಷಾಂತರ ರೂಪಾಯಿ ನಷ್ಟವಾಗಿದೆ. ಇನ್ನು ಗ್ಯಾಸ್ ಸಿಲಿಂಡರ್ ಸ್ಪೋಟದಿಂದ ದೊಡ್ಡ ದುರಂತ ತಪ್ಪಿದೆ. ಹೌದು, ಬೇಕರಿ ಪಕ್ಕದಲ್ಲೇ ಪೇಟ್ರೋಲ್ ಬಂಕ್ ಇತ್ತು. ಅದೃಷ್ಟವಶಾತ್​ ಯಾವುದೇ ತೊಂದರೆಯಾಗಿಲ್ಲ. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸಿದ್ದಾರೆ.

No Comments

Leave A Comment