ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಪ್ರೀತಿಗೆ ಪೋಷಕರ ವಿರೋಧ: ನೇಣಿಗೆ ಶರಣಾದ ಪ್ರೇಮಿಗಳು
ಆನೆಕಲ್, ಆಗಸ್ಟ್ 25: ಪ್ರೀತಿಗೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಮನನೊಂದು ಪ್ರೇಮಿಗಳು ಆತ್ಮಹತ್ಯೆಗೆ ಶರಣಾಗಿದ್ದಾರೆ. ಒಬ್ಬರಿಗೊಬ್ಬರು ತಬ್ಬಿಕೊಂಡು ಮನೆಯ ಪ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ತಮಿಳುನಾಡಿನ ಡೆಂಕಣಿಕೋಟೆಯ ಕೆಳಮಂಗಲ ಸಮೀಪದ ಗೌತಾಲಂ ಗ್ರಾಮದಲ್ಲಿ ಘಟನೆ ನಡೆದಿದೆ. ಗೌತಾಲಂ ಗ್ರಾಮದ ನರಸಿಂಹಮೂರ್ತಿ (22), ಬಾಚನಪ್ಪಟ್ಟಿ ಗ್ರಾಮದ ಯುವಶ್ರೀ (17) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.
ನರಸಿಂಹಮೂರ್ತಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದನು. ಯುವಶ್ರೀ ಕೃಷ್ಣಗಿರಿಯ ಸರ್ಕಾರಿ ಕಾಲೇಜಿನಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಳು. ನರಸಿಂಹ ಮೂರ್ತಿ ಹಾಗೂ ಯುವಶ್ರೀ ಕೆಲ ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇವರ ಪ್ರೀತಿಗೆ ಯುವಶ್ರೀ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.
ನರಸಿಂಹಮೂರ್ತಿ ಯುವಶ್ರೀಗೆ ಕಿರುಕುಳ ನೀಡುತ್ತಿದ್ದಾನೆಂದು ಯುವಶ್ರೀ ಪೋಷಕರು ಕಳೆದ ತಿಂಗಳು ಡೆಂಕಣಿಕೋಟೆ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪೊಲೀಸರು ಪೋಕ್ಸೋ ಕಾಯ್ದೆಯಡಿ ನರಸಿಂಹಮೂರ್ತಿಯನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. 10 ದಿನಗಳ ಹಿಂದೆಯಷ್ಟೇ ಜಾಮೀನಿನ ಮೇಲೆ ನರಸಿಂಹಮೂರ್ತಿ ಜೈಲಿನಿಂದ ಹೊರಬಂದಿದ್ದನು.
ನರಸಿಂಹಮೂರ್ತಿ ಜೈಲಿನಿಂದ ಹೊರಬಂದ ಬಳಿಕ ಯುವಶ್ರಿ ಜೊತೆ ಜೊತೆ ನಿರಂತರ ಫೋನ್ನಲ್ಲಿ ಸಂಪರ್ಕ ಇದ್ದನು. ಯುವಶ್ರೀ ಶುಕ್ರವಾರ ಸಂಜೆ ಕಾಲೇಜು ಮುಗಿಸಿ ನರಸಿಂಹಮೂರ್ತಿ ಮನೆಗೆ ಹೋಗಿದ್ದಾಳೆ. ಪ್ರೀತಿಗೆ ಪೋಷಕರು ವಿರೋಧ ಮಾಡುತ್ತಿರುವುದರಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದಾರೆ. ಮನೆಯ ಬಾಗಿಲು ಹಾಕಿಕೊಂಡು ಒಬ್ಬರಿಗೊಬ್ಬರು ತಬ್ಬಿಕೊಂಡು ಇಬ್ಬರು ಪ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಎಷ್ಟು ಹೊತ್ತಾದರೂ, ಮನೆಯ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡ ಯುವಕನ ಪೋಷಕರು ಬಾಗಿಲು ಮುರಿದು ಒಳ ಹೋಗಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಡೆಂಕಣಿಕೋಟೆ ಡಿವೈಎಸ್ಪಿ ಶಾಂತಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಒಂದು ವರ್ಷದ ಹಿಂದೆ ಕೋಲಾರ ತಾಲೂಕಿನ ತೂರಾಂಡಹಳ್ಳಿ ಗ್ರಾಮದ ಉಲ್ಲಾಸ್ ಗೌಡ ಎಂಬುವರ ಜೊತೆ ಮಾನಸ ಮದುವೆಯಾಗಿತ್ತು. ಪತಿ ಉಲ್ಲಾಸ್ ಹಾಗೂ ಕುಟುಂಬಸ್ಥರಿಂದ ವರದಕ್ಷಿಣೆ ಕಿರುಕುಳ ನೀಡುತ್ತಿದ್ದಾರೆ ಎಂದು ಮೃತ ಮಾನಸ ತವರುಮನೆಗೆ ಬಂದು ಪೋಷಕರ ಜೊತೆ ವಾಸವಾಗಿದ್ದಳು. ಆದರೆ, ಇದೀಗ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.