ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಮನೆ ಸೇರಿ 14 ಕಡೆಗಳಲ್ಲಿ ಸಿಬಿಐ ದಾಳಿ

ಕೋಲ್ಕತ್ತಾ: ಆರ್‌ಜಿ ಕಾರ್ ವೈದ್ಯಕೀಯ ಕಾಲೇಜಿನ ಮಾಜಿ ಪ್ರಾಂಶುಪಾಲ ಸಂದೀಪ್ ಘೋಷ್ ಅವರ ನಿವಾಸದ ಮೇಲೆ ಕೇಂದ್ರ ತನಿಖಾ ದಳ (ಸಿಬಿಐ) ಇಂದು ಮುಂಜಾನೆ ದಾಳಿ ನಡೆಸಿದೆ. ಅವರ ಅವಧಿಯಲ್ಲಿ ಕಾಲೇಜಿನಲ್ಲಿ ನಡೆದ ಆರ್ಥಿಕ ಅವ್ಯವಹಾರ ಆರೋಪದ ಮೇಲೆ ದಾಳಿ ನಡೆಸಲಾಗಿತ್ತು. ಈ ಬಗ್ಗೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇದಲ್ಲದೇ ನಗರದ ಇತರ 14 ಕಡೆಗಳಲ್ಲಿಯೂ ಕೇಂದ್ರ ತನಿಖಾ ಸಂಸ್ಥೆ ಶೋಧ ನಡೆಸುತ್ತಿದೆ. ದಾಳಿಯ ಸಂದರ್ಭದಲ್ಲಿ, ಸಿಬಿಐನ ಭ್ರಷ್ಟಾಚಾರ ನಿಗ್ರಹ ವಿಭಾಗದ ಅಧಿಕಾರಿಗಳು ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ಪ್ರಾತ್ಯಕ್ಷಕ ಡಾ. ದೇಬಾಶಿಶ್ ಸೋಮ್ ಅವರ ನಿವಾಸದ ಮೇಲೂ ದಾಳಿ ಮಾಡಿದೆ.

ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಮಾಜಿ ಉಪ ಅಧೀಕ್ಷಕ ಅಖ್ತರ್ ಅಲಿ ಮೂರು ದಿನಗಳ ಹಿಂದೆ ನೀಡಿದ ದೂರಿನ ಮೇರೆಗೆ ಈ ಕ್ರಮ ಕೈಗೊಳ್ಳಲಾಗಿದೆ. ದೂರಿನಲ್ಲಿ ಡಾ.ದೇಬಶಿಶ್ ಸೋಮ್ ವಿರುದ್ಧ ಸಂಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಅವ್ಯವಹಾರದ ಆರೋಪಗಳನ್ನು ಮಾಡಲಾಗಿತ್ತು. ಕೋಲ್ಕತ್ತಾ ಹೈಕೋರ್ಟ್‌ನ ಆದೇಶದ ಮೇರೆಗೆ ಸಿಬಿಐ, ಡಾ. ಸಂದೀಪ್ ಘೋಷ್ ವಿರುದ್ಧ ಎಫ್‌ಐಆರ್ ದಾಖಲಿಸಿದೆ. ವೈದ್ಯಕೀಯ ಕಾಲೇಜಿನಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಹೈಕೋರ್ಟ್‌ನ ಏಕ ಪೀಠವು ಸೂಚಿಸಿದ ನಂತರ ತನಿಖೆ ಆರಂಭವಾಯಿತು. ಇದಕ್ಕೂ ಮುನ್ನ ಹೈಕೋರ್ಟ್‌ನ ವಿಶೇಷ ತನಿಖಾ ತಂಡ (ಎಸ್‌ಐಟಿ) ನಿಜಾಮ್ ಪ್ಯಾಲೇಸ್‌ನಲ್ಲಿರುವ ಸಿಬಿಐ ಕಚೇರಿಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ಹಸ್ತಾಂತರಿಸಿತ್ತು.

ಈ ಮಾಹಿತಿಯ ಮೇರೆಗೆ ಸಿಬಿಐ ಎಫ್‌ಐಆರ್ ದಾಖಲಿಸಿಕೊಂಡಿದ್ದು, ಅದರ ಪ್ರತಿಯನ್ನು ಅಲಿಪುರ ಮುಖ್ಯ ನ್ಯಾಯಿಕ ಮ್ಯಾಜಿಸ್ಟ್ರೇಟ್ (ಸಿಜೆಎಂ) ನ್ಯಾಯಾಲಯಕ್ಕೆ ಶನಿವಾರ ಸಲ್ಲಿಸಿದೆ. ಸೆಪ್ಟೆಂಬರ್ 17ರಂದು ಸಲ್ಲಿಸಲಿರುವ ತನಿಖೆಯ ಪ್ರಗತಿ ವರದಿಯನ್ನು ಸಲ್ಲಿಸಲು ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ಮೂರು ವಾರಗಳ ಕಾಲಾವಕಾಶ ನೀಡಿದೆ.

ಆಗಸ್ಟ್ 9ರಂದು ಸೆಮಿನಾರ್ ಹಾಲ್‌ನಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನಂತರ ಆರ್‌ಜಿ ಕರ್ ಆಸ್ಪತ್ರೆಯ ಹಗರಣಗಳು ಬೆಳಕಿಗೆ ಬಂದಿತ್ತು. ಈ ಆರೋಪದ ಮೇಲೆ ಸಂಜಯ್ ರಾಯ್ ಅವರನ್ನು ಬಂಧಿಸಲಾಗಿತ್ತು. ಕಲ್ಕತ್ತಾ ಹೈಕೋರ್ಟಿನ ಸೂಚನೆಯ ಮೇರೆಗೆ ಸಿಬಿಐ ಕೊಲೆ ಪ್ರಕರಣಗಳು ಮತ್ತು ಹಣಕಾಸಿನ ಅವ್ಯವಹಾರದ ಪ್ರಕರಣಗಳನ್ನು ದಾಖಲಿಸಿದೆ.

No Comments

Leave A Comment