ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಬೈಕ್ಗೆ ಕಾರು ಡಿಕ್ಕಿ ಹೊಡೆಸಿದ ಅಪ್ರಾಪ್ತ ಬಾಲಕ, ಹಾಲಿನ ವ್ಯಾಪಾರಿ ಸ್ಥಳದಲ್ಲೇ ಸಾವು
ಹಾಲಿನ ವ್ಯಾಪಾರಿ ಇದ್ದ ಬೈಕ್ಗೆ ಅಪ್ರಾಪ್ತ ಬಾಲಕ ಕಾರನ್ನು ಡಿಕ್ಕಿ ಹೊಡೆಸಿರುವ ಘಟನೆ ಗೋರೆಗಾಂವ್ನಲ್ಲಿ ನಡೆದಿದೆ, ವ್ಯಾಪಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಎಸ್‌ಯುವಿ ವೇಗವಾಗಿ ಬಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದ್ದಾನೆ. ಮುಂಜಾನೆ 4 ಗಂಟೆ ಸುಮಾರಿಗೆ ಆರೆ ಕಾಲೋನಿಯಲ್ಲಿ ಈ ಘಟನೆ ನಡೆದಿದೆ.
ದ್ವಿಚಕ್ರ ವಾಹನಕ್ಕೆ ರಾಂಗ್ ಸೈಡ್ ನಲ್ಲಿ ಬಂದ ಕಾರು ಡಿಕ್ಕಿ ಹೊಡೆದಿದ್ದು ನವೀನ್ ವೈಷ್ಣವ್ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆರೋಪಿ ಚಾಲಕನಿಗೆ 17 ವರ್ಷ ವಯಸ್ಸಾಗಿರುವುದರಿಂದ, ಎಸ್‌ಯುವಿ ಮಾಲೀಕ ಇಕ್ಬಾಲ್ ಜಿವಾನಿ (48) ಮತ್ತು ಅವರ ಮಗ ಮೊಹಮ್ಮದ್ ಫಾಜ್ ಇಕ್ಬಾಲ್ ಜಿವಾನಿ (21) ವಿರುದ್ಧವೂ ಪ್ರಕರಣ ದಾಖಲಿಸಲಾಗಿದೆ. ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ನಂತರ ಎಸ್‌ಯುವಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿದೆ. ಚಾಲಕ ಓಡಿ ಹೋಗಲು ಯತ್ನಿಸಿದ್ದ, ಆದರೆ ಗಾಯಗಳಾದ ಹಿನ್ನೆಲೆಯಲ್ಲಿ ಓಡಲಾಗದೆ ಪೊಲೀಸ್ ಕೈಗೆ ಸಿಕ್ಕಿಬಿದ್ದಿದ್ದಾನೆ.
ಮದ್ಯದ ಅಮಲಿನಲ್ಲಿದ್ದರೇ ಎಂಬುದನ್ನು ಖಚಿತಪಡಿಸಿಕೊಳ್ಳಲು ಅವರ ರಕ್ತದ ಮಾದರಿಗಳನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಅಪಘಾತಕ್ಕೂ ಮುನ್ನ ಆರೋಪಿ ತನ್ನ ಸ್ನೇಹಿತರೊಂದಿಗೆ ಪಾರ್ಟಿ ಮಾಡಿದ್ದಾನಾ ಎಂಬ ಬಗ್ಗೆಯೂ ಪೊಲೀಸರು ತನಿಖೆ ನಡೆಸುತ್ತಿದ್ದರು. ಇತ್ತೀಚೆಗೆ ಅಪ್ರಾಪ್ತ ಮಕ್ಕಳಿಂದ ಅಪಘಾತ ಹೆಚ್ಚಾಗುತ್ತಿದೆ. ಇನ್ನೂ ಪೋಷಕರು ಎಚ್ಚೆತ್ತುಕೊಳ್ಳದಿದ್ದರೆ ಸಾವು ಹೆಚ್ಚಾಗುತ್ತದೆ.