ಮಂಗಳೂರು: ಬಸ್-ಆಟೋ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಆಟೋ ಚಾಲಕ ಸಾವು
ಮಂಗಳೂರು, ಆ.30; ಬಸ್ ಆಟೋ ಡಿಕ್ಕಿಯಾಗಿ ಆಟೋ ಚಾಲಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ ಘಟನೆ ಮಂಗಳೂರು ನಗರದ ಹಂಪನಕಟ್ಟೆ ಖಾಸಗಿ ಹೊಟೇಲ್ ಬಳಿ ಇಂದು ನಡೆದಿದೆ.
ಡಿಕ್ಕಿ ರಭಸಕ್ಕೆ ಆಟೋ ಚಾಲಕ ದೇವರಾಜ್ ಸಾವನ್ನಪ್ಪಿದ್ದಾರೆ.
ಅವಘಡದಲ್ಲಿ ಆಟೋ ಚಾಲಕ ದೇವರಾಜ್ ಅವರಿಗೆ ಗಂಭೀರ ಗಾಯವಾಗಿದ್ದರಿಂದ ಅವರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ದೇವರಾಜ್ ಅವರು, ಚಿಕಿತ್ಸೆ ಸ್ಪಂದಿಸದೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಡಿಕ್ಕಿ ರಭಸಕ್ಕೆ ಆಟೋ ನಜ್ಜುಗುಜ್ಜಾಗಿದೆ. ಇನ್ನು ಸ್ಥಳಕ್ಕೆ ಮಂಗಳೂರು ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.