ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
Paralympics 2024: ಭಾರತಕ್ಕೆ ಮೊದಲ ಚಿನ್ನದ ಪದಕ; 10 ಮೀ. ಏರ್ ರೈಫಲ್ನಲ್ಲಿ ಚಿನ್ನ ಗೆದ್ದ ಅವನಿ ಲೇಖರಾ
ಪ್ಯಾರಿಸ್ ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ಸಿಕ್ಕಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ (SH1) ವಿಭಾಗದಲ್ಲಿ ಅವನಿ ಲೇಖರಾ ಇತಿಹಾಸ ಸೃಷ್ಟಿಸಿದ್ದು, 249.7 ಅಂಕ ಗಳಿಸುವ ಮೂಲಕ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ. ಇದಲ್ಲದೆ ಟೋಕಿಯೋ ಒಲಿಂಪಿಕ್ಸ್ನಲ್ಲಿ ನಿರ್ಮಿಸಿದ್ದ ತಮ್ಮದೇ ದಾಖಲೆಯನ್ನು ಅವನಿ ಮುರಿದಿದ್ದಾರೆ. ವಾಸ್ತವವಾಗಿ ಟೋಕಿಯೋ ಒಲಿಂಪಿಕ್ಸ್ನಲ್ಲಿ ಅವನಿ ಒಟ್ಟಾರೆಯಾಗಿ 249.6 ಅಂಕ ಕಲೆಹಾಕಿ ಚಿನ್ನದ ಪದಕ ಗೆದ್ದಿದ್ದರು. ಇದೀಗ ಪ್ಯಾರಿಸ್ನಲ್ಲಿ 249.7 ಅಂಕ ಗಳಿಸುವ ಮೂಲಕ ಚಿನ್ನ ಗೆದ್ದಿರುವ ಅವನಿ ತಮ್ಮದೇ ಹಳೆಯ ದಾಖಲೆಯನ್ನು ಪುಡಿಗಟ್ಟಿದ್ದಾರೆ. ಇದಲ್ಲದೆ ಪ್ಯಾರಾಲಿಂಪಿಕ್ಸ್‌ನಲ್ಲಿ ಸತತ ಎರಡನೇ ಬಾರಿಗೆ ಚಿನ್ನದ ಪದಕ ಗೆದ್ದ ಸಾಧನೆಯನ್ನು ಅವನಿ ಮಾಡಿದ್ದಾರೆ. ಇನ್ನು ಇದೇ ಸ್ಪರ್ಧೆಯಲ್ಲಿ ಭಾರತದ ಮತ್ತೋರ್ವ ಪ್ಯಾರಾ ಶೂಟರ್ ಮೋನಾ ಅಗರ್ವಾಲ್ 228.7 ಅಂಕ ಗಳಿಸಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ.
625.8 ಅಂಕ ಗಳಿಸಿ ಫೈನಲ್‌ಗೆ ಲಗ್ಗೆ
ಫೈನಲ್ ಸುತ್ತಿಗೂ ಮುನ್ನ ನಡೆದಿದ್ದ ಮಹಿಳೆಯರ 10 ಮೀಟರ್ ಏರ್ ರೈಫಲ್ ಫೈನಲ್ (SH1) ಅರ್ಹತಾ ಸುತ್ತಿನಲ್ಲಿ 625.8 ಅಂಕ ಕಲೆಹಾಕಿ ಎರಡನೇ ಸ್ಥಾನ ಗಳಿಸುವ ಮೂಲಕ ಅವನಿ ಫೈನಲ್‌ಗೆ ಪ್ರವೇಶಿಸಿದ್ದರು. ಹಾಗೆಯೇ ಭಾರತದ ಮತ್ತೋರ್ವ ಪ್ಯಾರಾ ಶೂಟರ್ ಮೋನಾ ಅಗರ್ವಾಲ್ ಕೂಡ ಫೈನಲ್ ಅರ್ಹತಾ ಸುತ್ತಿನಲ್ಲಿ ಐದನೇ ಸ್ಥಾನ ಪಡೆದು ಫೈನಲ್‌ಗೆ ಲಗ್ಗೆ ಇಟ್ಟಿದ್ದರು. ಇದೀಗ ಈ ಇಬ್ಬರು ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಉಳಿದಂತೆ ದಕ್ಷಿಣ ಕೊರಿಯಾದ ಲೀ ಯುನ್ರಿ ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡರು.
12 ನೇ ವಯಸ್ಸಿನಲ್ಲಿ ಕಾರು ಅಪಘಾತ
ಅವನಿ ಲೇಖರಾ ರಾಜಸ್ಥಾನದ ಜೈಪುರ ನಿವಾಸಿ. 2012 ರಲ್ಲಿ ಕಾರು ಅಪಘಾತದಲ್ಲಿ ಅವನಿ ವಅರ ಬೆನ್ನುಹುರಿಗೆ ಗಂಭೀರವಾಗಿ ಗಾಯವಾಗಿತ್ತು. ಇದರಿಂದಾಗಿ ಅವರು ಪಾರ್ಶ್ವವಾಯುವಿಗೆ ಒಳಗಾದರು. ಆ ಸಮಯದಲ್ಲಿ ಅವನಿ ಅವರಿಗೆ ಕೇವಲ 12 ವರ್ಷ. ಆದರೆ ಇದಾದ ನಂತರವೂ ಛಲ ಬಿಡದ ಅವನಿ ಶೂಟಿಂಗ್ ಅನ್ನೇ ವೃತ್ತಿಯನ್ನಾಗಿಸಿಕೊಂಡರು. ಇದಾದ ಬಳಿಕ 2015ರಲ್ಲಿ ಮೊದಲ ಬಾರಿಗೆ ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಭಾಗವಹಿಸಿದ ಅವನಿ ಆ ಬಳಿಕ ಹಿಂತಿರುಗಿ ನೋಡಲಿಲ್ಲ.