ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಜಮ್ಮು ಕಾಶ್ಮೀರದ ವೈಷ್ಣೋದೇವಿ ದೇಗುಲದ ಬಳಿ ಭೂಕುಸಿತ; ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ವೈಷ್ಣೋದೇವಿ ದೇಗುಲಕ್ಕೆ ಹೋಗುವ ಮಾರ್ಗದಲ್ಲಿ ಇಂದು (ಸೋಮವಾರ) ಸಂಭವಿಸಿದ ಭೂಕುಸಿತದ ನಂತರ ಇಬ್ಬರು ಮಹಿಳಾ ಯಾತ್ರಾರ್ಥಿಗಳು ಸಾವನ್ನಪ್ಪಿದ್ದಾರೆ. ಈ ಘಟನೆಯಲ್ಲಿ ಓರ್ವ ಬಾಲಕಿಗೆ ತೀವ್ರ ಗಾಯಗಳಾಗಿವೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮಂಡಳಿಯ ವಿಪತ್ತು ನಿರ್ವಹಣಾ ತಂಡವು ಸ್ಥಳಕ್ಕೆ ತಲುಪಿದೆ ಎಂದು ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿಯ ಸಿಇಒ ತಿಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಕತ್ರಾದಲ್ಲಿ ಮಾತಾ ವೈಷ್ಣೋ ದೇವಿ ಟ್ರ್ಯಾಕ್‌ನಲ್ಲಿ ಭೂಕುಸಿತ ಸಂಭವಿಸಿ ಇಬ್ಬರು ಸಾವನ್ನಪ್ಪಿದ್ದಾರೆ, ಮತ್ತೊಬ್ಬರು ಗಾಯಗೊಂಡಿದ್ದಾರೆ. ಈ ಸ್ಥಳದಿಂದ ಸಂಗ್ರಹಿಸಲಾದ ಸಿಸಿಟಿವಿ ವಿಡಿಯೋ ಮಾರ್ಗದಲ್ಲಿ ಬಿದ್ದ ಅವಶೇಷಗಳನ್ನು ತೋರಿಸಿದೆ.
ಈ ಘಟನೆಯನ್ನು ದೃಢಪಡಿಸಿದ ಮಾತಾ ವೈಷ್ಣೋ ದೇವಿ ದೇಗುಲ ಮಂಡಳಿ, ವಿಪತ್ತು ನಿರ್ವಹಣೆಯ ತಂಡವು ರಕ್ಷಣಾ ಕಾರ್ಯಾಚರಣೆಗಾಗಿ ಸ್ಥಳಕ್ಕೆ ತಲುಪಿದೆ ಎಂದು ಹೇಳಿದೆ. ಶ್ರೀ ಮಾತಾ ವೈಷ್ಣೋದೇವಿ ದೇಗುಲದ ಟ್ರ್ಯಾಕ್‌ನಲ್ಲಿ ಕಲ್ಲುಗಳು ಉರುಳಿ, ಭೂಕುಸಿತ ಸಂಭವಿಸಿದೆ. ಹವಾಮಾನ ಇಲಾಖೆಯು ಜಮ್ಮು ಮತ್ತು ಕಾಶ್ಮೀರದಲ್ಲಿ ಸೆಪ್ಟೆಂಬರ್ 12ರವರೆಗೆ ಜಮ್ಮು ಕಾಶ್ಮೀರದಲ್ಲಿ ಶುಷ್ಕ ಹವಾಮಾನವನ್ನು ಮುನ್ಸೂಚನೆ ನೀಡಿದೆ.
ಕೇಂದ್ರಾಡಳಿತ ಪ್ರದೇಶವು ಕೆಲವು ದಿನಗಳಲ್ಲಿ ಪ್ರತ್ಯೇಕ ಭಾಗಗಳಲ್ಲಿ ಅಲ್ಪಾವಧಿಯ ಮಳೆಗೆ ಸಾಕ್ಷಿಯಾಗಲಿದೆ. ಇಂದು ಮುಂಜಾನೆ, ಭಾರೀ ಮಳೆಯಿಂದ ಉಂಟಾದ ಭೂಕುಸಿತಗಳು ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ್ ರಾಷ್ಟ್ರೀಯ ಹೆದ್ದಾರಿಯನ್ನು ಹಲವಾರು ಕಡೆಗಳಲ್ಲಿ ನಿರ್ಬಂಧಿಸಿವೆ.
ಪಗಲ್ನಾಳ, ಪಾತಾಳಗಂಗಾ ಮತ್ತು ನಂದಪ್ರಯಾಗದಲ್ಲಿ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಅದನ್ನು ಮತ್ತೆ ತೆರೆಯುವ ಪ್ರಯತ್ನಗಳು ನಡೆಯುತ್ತಿವೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಕೇಂದ್ರವು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ. ಸಿಮ್ಲಿ ಮಾರುಕಟ್ಟೆಯ 7 ಅಂಗಡಿಗಳು ಭೂಕುಸಿತದಿಂದ ಹಾನಿಗೊಳಗಾಗಿವೆ ಎಂದು ಅದು ಹೇಳಿದೆ.