ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ರಾಮ ಮಂದಿರ ಬಗ್ಗೆ ಅವಹೇಳನಕಾರಿ ಹೇಳಿಕೆ, ಮತಾಂತರಕ್ಕೆ ಒತ್ತಾಯಿಸಿದ್ದ ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಅರೆಸ್ಟ್​

ಉಡುಪಿ, ಸೆಪ್ಟೆಂಬರ್​ 03: ಹಿಂದೂ  ಧರ್ಮ, ರಾಮ ಮಂದಿರದ  ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ, ಇಸ್ಲಾಂಗೆ ಮತಾಂತರವಾಗುವಂತೆ  ಸಹಪಾಠಿಗೆ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯಕೀಯ ವಿದ್ಯಾರ್ಥಿ ವಿರುದ್ಧ ಉಡುಪಿ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ. ವೈದ್ಯಕೀಯ ವಿದ್ಯಾರ್ಥಿ ಮಹಮ್ಮದ್ ಡ್ಯಾನಿಷ್ ಖಾನ್ (27) ಕಿರುಕುಳ ನೀಡಿದ ಆರೋಪಿ. ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್ ಮಣಿಪಾಲ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಾಂಗ ಮಾಡುತ್ತಿದ್ದನು. ಈ ವೇಳೆ ತನ್ನ ಜೊತೆ ಓದುತ್ತಿದ್ದ ವೈದ್ಯಕೀಯ ವಿದ್ಯಾರ್ಥಿನಿಯ ಜೊತೆ ಸ್ನೇಹ ಬೆಳಸಿದ್ದಾನೆ. ಇಬ್ಬರೂ ಹೊರ ರಾಜ್ಯದವರಾಗಿದ್ದು, ವಿದ್ಯಾಭ್ಯಾಸಕ್ಕಾಗಿ ಇಲ್ಲಿಗೆ ಬಂದಿದ್ದಾರೆ.

ಇಬ್ಬರ ನಡುವೆ ಸ್ನೇಹ ಬೆಳೆದ ನಂತರ, ಪರಸ್ಪರ ಫೋನ್ ನಂಬರ್ ಬದಲಾಯಿಸಿಕೊಂಡಿದ್ದಾರೆ. ಮುಂದೆ, ಗೆಳೆತನ ಪ್ರೀತಿಗೆ ತಿರುಗಿದೆ. ಇಬ್ಬರು ಪರಸ್ಪರ ಗಾಢವಾಗಿ ಪ್ರೀತಿಸಲು ಆರಂಭಿಸಿದ್ದಾರೆ. ನಂತರ, ಇದೇ ವರ್ಷ ಜನವರಿ 22 ರಂದು ರಾಮ ಮಂದಿರ ಉದ್ಘಾಟನೆ ವೇಳೆ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಪ್ರೇಯಸಿಯ ಎದುರು ಹಿಂದೂ ಧರ್ಮ ಹಾಗೂ ರಾಮ ಮಂದಿರದ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಬಳಿಕ, ಮಾರ್ಚ್​​ 11 ರಂದು ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ತನ್ನ ಪ್ರೇಯಸಿಯ ರೂಮ್​ಗೆ ಹೋಗಿದ್ದಾನೆ. ಈ ವೇಳೆ ಪ್ರೇಯಸಿಗೆ ಮುಸ್ಲಿಂ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿದ್ದಾನೆ. ಆಗ, ಪ್ರೇಯಸಿ ನಿರಾಕರಿಸಿದಾಗ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್, ಆಕೆಯ ಕೆನ್ನೆಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದಾನೆ. ಅಲ್ಲದೇ, ದೇಹದ ಖಾಸಗಿ ಭಾಗವನ್ನು ಮುಟ್ಟಿ ಲೈಂಗಿಕತೆಗೆ ಬೇಡಿಕೆ ಇಟ್ಟಿದ್ದಾನೆ. ನಿರಂತರವಾಗಿ, ಪೋನ್‌ನಲ್ಲಿ ಕಿರುಕುಳ ಕೊಡಲು ಆರಂಭಿಸಿದ್ದಾನೆ ಎಂದು ವಿದ್ಯಾರ್ಥಿನಿ ದೂರಿನಲ್ಲಿ ದಾಖಲಿಸಿದ್ದಾಳೆ.

ಈತನ ಕಿರುಕುಳದಿಂದ ರೋಸಿ ಹೋದ ವಿದ್ಯಾರ್ಥಿನಿ ಆಗಸ್ಟ್​ 31 ರಂದು ಉಡುಪಿ ಮಹಿಳಾ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಕೂಡಲೆ ಪೊಲೀಸರು ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್​​ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಆರೋಪಿ ಮಹಮ್ಮದ್ ಡ್ಯಾನಿಷ್ ಖಾನ್​ಗೆ ನ್ಯಾಯಾಂಗ ಬಂಧನ ವಿಧಿಸಿದೆ.

No Comments

Leave A Comment