Log In
BREAKING NEWS >
````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ಹಾಗೂ ಓದುಗರಿಗೆ ಶ್ರೀ ಗೌರಿ-ಗಣೇಶನ ಹಬ್ಬದ ಶುಭಾಶಯಗಳು```````

ಚಾಮುಂಡಿ ಬೆಟ್ಟ ಪ್ರಾಧಿಕಾರ: ರಾಜಮನೆತನ V/s​ ಸರ್ಕಾರ; ಸಭೆ ಮೂಲಕ ಕೋರ್ಟ್ ಆದೇಶ ಉಲ್ಲಂಘಿಸಿದ್ದಾರೆಂದ ಯದುವೀರ್

ಬೆಂಗಳೂರು: ಮುಡಾ ಹಗರಣ, ಸಿಎಂ ಬದಲಾವಣೆ ಗದ್ದಲದ ‌ನಡುವೆಯೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದ್ದಾರೆ. ಆದರೆ, ಈ ಸಭೆಗೆ ರಾಜಮನೆತನ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು, ಚಾಮುಂಡೇಶ್ವರಿ ಕ್ಷೇತ್ರ ಪ್ರಾಧಿಕಾರದ ಸಭೆ ನಿಯಮ ಬಾಹಿರವಾಗಿದೆ. ಸಭೆ ಮೂಲಕ ಸರ್ಕಾರ ನ್ಯಾಯಾಲಯದ ಆದೇಶ ಉಲ್ಲಂಘಿಸಿದೆ ಎಂದು ಹೇಳಿದ್ದಾರೆ.

ಪ್ರಾಧಿಕಾರದಿಂದ ನಮ್ಮ ನಂಬಿಕೆ, ಆಚರಣೆ ಪರಂಪರೆಗೆ ಧಕ್ಕೆ ಬರುತ್ತೆ. ನಮ್ಮ ಹಕ್ಕನ್ನು ನಾವು ಯಾವತ್ತೂ ಬಿಟ್ಟು ಕೊಡುವುದಿಲ್ಲ. ಬೆಟ್ಟವನ್ನು ನಿಯಂತ್ರಿಸಲು ಸರ್ಕಾರ ಪ್ರಾಧಿಕಾರ ರಚನೆ ಮಾಡುತ್ತಿದೆ. ಹುಂಡಿ ಹಣ ಆಯಾ ದೇವಸ್ಥಾನದ ಅಭಿವೃದ್ಧಿಗೆ ಬಳಕೆ ಆಗಬೇಕು. ಹಿಂದೂ ದೇವಾಲಯಗಳ ಮೇಲೆ ಏಕೆ ರೀತಿ ಮಾಡಲಾಗುತ್ತಿದೆ. ಪ್ರಾಧಿಕಾರ ರಚನೆಯಾದರೆ ನಮ್ಮ ಆಚರಣೆಗೂ ಬ್ರೇಕ್ ಬೀಳುತ್ತೆ. ಈ ಸಂಬಂಧ ಕಾನೂನು ಹೋರಾಟ ಮುಂದುವರಿಯಲಿದೆ ಎಂದು ತಿಳಿಸಿದರು.

ತಡೆಯಾಜ್ಞೆ ನಡುವೆಯೂ ಸಭೆ ನಡೆಸುತ್ತಿರುವುದು ನ್ಯಾಯಾಂಗ ನಿಂದನೆ ಆಗುತ್ತದೆ. ನ್ಯಾಯಾಂಗ ನಿಂದನೆಗೆ ಒಳಪಡುವ ಸಭೆಗೆ ನಾನು ಹೋಗುವುದಿಲ್ಲ. ಪ್ರಾಧಿಕಾರ ರಚನೆ ಸಂಬಂಧ ಸೆಪ್ಟೆಂಬರ್​​ 5ರವರೆಗೆ ತಡೆಯಾಜ್ಞೆ ಇರುವುದು ಸತ್ಯ. ಮುಖ್ಯಮಂತ್ರಿಗಳು ಹೇಗೆ ತಡೆಯಾಜ್ಞೆ ತೆರವಾಗಿದೆ ಎಂದು ಹೇಳಿದರು ಗೊತ್ತಿಲ್ಲ ಎಂದರು.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆ ಆಕ್ಷೇಪ ವ್ಯಕ್ತಪಡಿಸಿ ಪ್ರಮೋದಾದೇವಿ ಒಡೆಯರ್​ ಅವರು ಜುಲೈ 26 ರಂದು ತಡೆಯಾಜ್ಞೆ ತಂದಿದ್ದರು. ಈ ತಡೆಯಾಜ್ಞೆ ತೆರವುಗೊಳಿಸುವಂತೆ ಸರ್ಕಾರ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದೆ. ಸರ್ಕಾರದ ಪರ ವಕೀಲರು ನ್ಯಾಯಾಲಯಕ್ಕೆ, ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಗೆ ಸರ್ಕಾರ ಜೂನ್​ 28 ರಂದು ಆದೇಶ ಹೊರಡಿಸಿತ್ತು. ಜುಲೈ 1 ರಿಂದಲೇ ಕಾಯ್ದೆ ಜಾರಿಗೆ ಬಂದಿದೆ. ಹೀಗಾಗಿ ತಡೆಯಾಜ್ಞೆ ಮಧ್ಯಂತರ ಆದೇಶ ತೆರವು ಮಾಡಬೇಕು ಎಂದು ಮನವಿ ಮಾಡಿದರು.

ಪ್ರಮೋದಾದೇವಿ ಒಡೆಯರ್​ ಪರ ವಕೀಲರು ಮತ್ತೆ ಮಧ್ಯಂತರ ಆದೇಶವನ್ನು ನೀಡಬೇಕು ಎಂದು ಕೋರಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ, ಪ್ರಕರಣ ಸಂಬಂಧ ಆಕ್ಷೇಪಣೆ ಸಲ್ಲಿಸುವಂತೆ ಒಡೆಯರ್​ ಪರ ವಕೀಲರಿಗೆ ಸೂಚನೆ ನೀಡಿ, ವಿಚಾರಣೆಯನ್ನು ಸೆಪ್ಟೆಂಬರ್​ 5ಕ್ಕೆ ಮುಂದೂಡಿದೆ.

No Comments

Leave A Comment