ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಕೋವಲಂ: ಟ್ರಕ್‌ಗೆ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲೇ ಸಾವು
ಕೋವಲಂ: ತಮಿಳು ನಾಡು ರಾಜಧಾನಿ ಚೆನ್ನೈಯಿಂದ ಸುಮಾರು 20 ಕಿಮೀ ದೂರದಲ್ಲಿರುವ ಈಸ್ಟ್ ಕೋಸ್ಟ್ ರಸ್ತೆಯ ಕೋವಲಂ ಬಳಿ ನಿಂತಿದ್ದ ಮಿನಿ ಟ್ರಕ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಯುವಕರು ಬುಧವಾರ ಬೆಳಗ್ಗೆ ಮೃತಪಟ್ಟಿರುವ ಘಟನೆ ನಡೆದಿದೆ.
ಸೆಮ್ಮಂಚೇರಿ ಕುಪ್ಪಂ ಬಸ್ ನಿಲ್ದಾಣದ ಬಳಿ ಈ ಘಟನೆ ನಡೆದಿದೆ. ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಟ್ರಕ್‌ನ ಹಿಂಬದಿಯ ಕೆಳಗೆ ಬಿದ್ದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಟ್ರಕ್ ಕೆಟ್ಟು ಹೋಗಿದ್ದರಿಂದ ರಸ್ತೆ ಬದಿ ನಿಂತಿತ್ತು. ಮೃತ ಯುವಕರ ಗುರುತು ಇನ್ನೂ ಪತ್ತೆಯಾಗಿಲ್ಲ.