ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಭಾರತಕ್ಕೆ 6ನೇ ಚಿನ್ನದ ಪದಕ; ಹೈಜಂಪ್​ನಲ್ಲಿ ಬಂಗಾರ ಗೆದ್ದ ಪ್ರವೀಣ್ ಕುಮಾರ್

ಪ್ಯಾರಿಸ್ ಪ್ಯಾರಾಲಿಂಪಿಕ್ಸ್​ನಲ್ಲಿ ಭಾರತ ತನ್ನ ಆರನೇ ಚಿನ್ನದ ಪದಕವನ್ನು ಪಡೆದುಕೊಂಡಿದೆ. ಕ್ರೀಡಾಕೂಟದ ಒಂಬತ್ತನೇ ದಿನ ಪುರುಷರ ಹೈಜಂಪ್-ಟಿ64 ಸ್ಪರ್ಧೆಯಲ್ಲಿ ಭಾರತದ ಪ್ರವೀಣ್ ಕುಮಾರ್ ಚಿನ್ನದ ಪದಕವನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಇದು ಪ್ಯಾರಾಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಕ್ಕ 26 ನೇ ಪದಕ ಮತ್ತು ಆರನೇ ಚಿನ್ನದ ಪದಕವಾಗಿದೆ.

ಪ್ರವೀಣ್ ಕುಮಾರ್ ಅವರು 2.08 ಮೀಟರ್ ಎತ್ತರ ಜಿಗಿಯುವ ಮೂಲಕ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡರು. ಇದು ಪ್ಯಾರಾಲಿಂಪಿಕ್ಸ್ ಇತಿಹಾಸದಲ್ಲಿ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಭಾರತಕ್ಕೆ ಇದುವರೆಗೆ ಸಿಕ್ಕಿರುವ 11ನೇ ಪದಕವಾಗಿದೆ. ಈ ಚಿನ್ನದ ಸಾಧನೆಯೊಂದಿಗೆ ಪ್ಯಾರಾ ಅಥ್ಲೀಟ್ ಪ್ರವೀಣ್ ಕುಮಾರ್, ಪ್ಯಾರಾಲಿಂಪಿಕ್ಸ್‌ನ ಎತ್ತರ ಜಿಗಿತ ಸ್ಪರ್ಧೆಯಲ್ಲಿ ಮರಿಯಪ್ಪನ್ ತಂಗವೇಲು ನಂತರ ಚಿನ್ನದ ಪದಕ ಗೆದ್ದ ಎರಡನೇ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

No Comments

Leave A Comment