ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.
ನಟ ದರ್ಶನ್ ಸೇರಿ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಸೆಪ್ಟೆಂಬರ್ 12ರವರೆಗೆ ವಿಸ್ತರಣೆ
ರೇಣುಕಾ ಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿದಂತೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಇಂದಿಗೆ (ಸೆಪ್ಟೆಂಬರ್ 9) ಕೊನೆ ಆಗುವುದರಲ್ಲಿತ್ತು. ಹೀಗಾಗಿ, ಅವರನ್ನು ಕೋರ್ಟ್ ಎದುರು ಹಾಜರುಪಡಿಸಲಾಗಿದೆ. ಈ ವೇಳೆ ಎಲ್ಲಾ 17 ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಸೆಪ್ಟೆಂಬರ್ 12ರವರೆಗೆ ವಿಸ್ತರಿಸಿ ಕೋರ್ಟ್ ಆದೇಶ ನೀಡಿದೆ.
ದರ್ಶನ್ ಅವರು ಬಳ್ಳಾರಿ ಜೈಲಿನಿಂದ, ಪವಿತ್ರಾ ಗೌಡ ಬೆಂಗಳೂರು ಕೇಂದ್ರ ಕಾರಾಗೃಹದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು. ಅದೇ ರೀತಿ ಈ ಪ್ರಕರಣದಲ್ಲಿ ಬೇರೆ ಬೇರೆ ಜೈಲು ಸೇರಿರುವ ಎಲ್ಲರೂ ವಿಚಾರಣೆ ಎದುರಿಸಿದರು. ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನ ವಿಸ್ತರಣೆ ಆಗಿದೆ. ಸೆಪ್ಟೆಂಬರ್ 12ರಂದು ಇವರು ಮತ್ತೆ ಕೋರ್ಟ್ ಎದುರು ಹಾಜರಾಗಬೇಕಾಗಿದೆ.
ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ಗೆ ಹಾಜರಾದ ಸರ್ಕಾರಿ ವಕೀಲ ಪ್ರಸನ್ನ ಕುಮಾರ್ ಅವರು ಪ್ರಕರಣದ ಪ್ರಾಥಮಿಕ ಸಾಕ್ಷ್ಯಾಧಾರಗಳ ಸಲ್ಲಿಸಿದರು. ಪೆನ್ಡ್ರೈವ್, ಹಾರ್ಡ್ಡಿಸ್ಕ್ ಸೇರಿ ಹಲವು ಸಾಕ್ಷ್ಯಾಧಾರಗಳ ಸಲ್ಲಿಕೆ ಮಾಡಿದ್ದಾರೆ. ಇವುಗಳನ್ನು ಜಡ್ಜ್ ಪರಿಶೀಲನೆ ಮಾಡಲಿದ್ದಾರೆ.
ನಟ ದರ್ಶನ್ ಅವರು ಜೈಲು ಸೇರಿ ಮೂರು ತಿಂಗಳು ಕಳೆಯುತ್ತಾ ಬಂದಿದೆ. ಜೂನ್ 11ರಂದು ದರ್ಶನ್, ಪವಿತ್ರಾ ಮೊದಲಾದವರು ಅರೆಸ್ಟ್ ಆದರು. ಆ ಬಳಿಕ ಹಂತ ಹಂತವಾಗಿ ಎಲ್ಲರೂ ಬಂಧನಕ್ಕೆ ಒಳಗಾಗುತ್ತಾ ಬಂದರು. ಈ ಪ್ರಕರಣದಲ್ಲಿ ಒಟ್ಟೂ 17 ಮಂದಿಯನ್ನು ಬಂಧಿಸಲಾಗಿದೆ.
ದರ್ಶನ್ ಅವರು ಜಾಮೀನಿಗೆ ಅರ್ಜಿ ಸಲ್ಲಿಕೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಪ್ರಕರಣದಲ್ಲಿ ಅವರು ಯಾವಾಗ ಜಾಮೀನು ಸಲ್ಲಿಕೆ ಮಾಡುತ್ತಾರೆ ಎಂಬುದನ್ನು ಕಾದು ನೋಡಬೇಕಿದೆ. ಅವರ ಪತ್ನಿ ವಿಜಯಲಕ್ಷ್ಮಿ ಅವರು ಈಗಾಗಲೇ ಜಾಮೀನು ಅರ್ಜಿಗೆ ದರ್ಶನ್ ಅವರಿಂದ ಸಹಿ ಪಡೆದಿದ್ದಾರೆ.