ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
60 ವರ್ಷದ ಮಹಿಳೆಗೆ ಪ್ರಜ್ವಲ್ನಿಂದ ಲೈಂಗಿಕ ದೌರ್ಜನ್ಯ: ಚಾರ್ಜ್ ಶೀಟ್ನಲ್ಲಿ ಉಲ್ಲೇಖ
ಬೆಂಗಳೂರು, ಸೆಪ್ಟೆಂಬರ್ 11: ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್ನಲ್ಲಿ ಉಲ್ಲೇಖಿಸಿದ್ದಾರೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಪ್ರಜ್ವಲ್ ರೇವಣ್ಣ ಅವರ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ನಡೆಸಿದ ಎಸ್ಐಟಿ 113 ಸಾಕ್ಷಿಗಳನ್ನು ಒಳಗೊಂಡ 1632 ಪುಟಗಳ ಚಾರ್ಜ್ಶೀಟ್ ಅನ್ನು ಸೋಮವಾರ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಿದೆ.
ಹೊಳೆನರಸೀಪುರದಲ್ಲಿ 60 ವರ್ಷದ ಮನೆಕೆಲಸದಾಕೆಯ ಮೇಲೆ ಪ್ರಜ್ವಲ್ ರೇವಣ್ಣ ಅತ್ಯಾಚಾರ ಎಸಗಿದ್ದಾರೆ ಎಂದು ಚಾರ್ಜ್ಶೀಟ್ನಲ್ಲಿ ಎಸ್ಐಟಿ ಅಧಿಕಾರಿಗಳು ಉಲ್ಲೇಖ ಮಾಡಿದ್ದಾರೆ. ಸಂತ್ರಸ್ತೆಯನ್ನ ಹೆದರಿಸಿ ಹಲವು ಬಾರಿ ದೌರ್ಜನ್ಯ ಎಸಗಿರುವುದು ತನಿಖೆಯಲ್ಲಿ ಧೃಡವಾಗಿದೆ.
ಕೃತ್ಯ ಎಸಗುವಾಗ ಮೊಬೈಲ್ ಮೂಲಕ ಪ್ರಜ್ವಲ್ ರೇವಣ್ಣ ಮೊಬೈಲ್ನಲ್ಲಿ ವಿಡಿಯೋ ಚಿತ್ರಿಕರಿಸಿದ್ದರು. ಸಂತ್ರಸ್ತೆ ಕೈಮುಗಿದು ನಿಮ್ಮ ತಾತ ಹಾಗೂ ತಂದೆಗೆ ಊಟ ಬಡಿಸಿದ್ದೇನೆ, ನನ್ನ ಬಿಟ್ಟು ಬಿಡು ಎಂದು ಸಂತ್ರಸ್ತೆ ಅಂಗಲಾಚಿದರೂ ಬಿಡದ ಪ್ರಜ್ವಲ್ ರೇವಣ್ಣ ದೌರ್ಜನ್ಯ ಎಸಗಿದ್ದಾರೆ ಎಂದು ಎಸ್ಐಟಿ ಉಲ್ಲೇಖಿಸಿದೆ.
ಚಾರ್ಜ್ಶೀಟ್ನಲ್ಲಿ ಸಿಆರ್ಪಿಸಿ 164 ಅಡಿ ಸಂತ್ರಸ್ತೆ ಹಾಗೂ ಪ್ರಮುಖ ಸಾಕ್ಷಿಗಳ ಹೇಳಿಕೆ ದಾಖಲು ಮಾಡಲಾಗಿದೆ. 113 ಮಂದಿ ಸಾಕ್ಷಿದಾರರ ಹೇಳಿಕೆ, ಡಿಜಿಟಲ್ ಸಾಕ್ಷಿದಾರರ, ಎಫ್ಎಸ್ಎಲ್ ವರದಿ ಸಲ್ಲಿಕೆ ಮಾಡಲಾಗಿದೆ. ಪ್ರಜ್ವಲ್ ರೇವಣ್ಣ ಒಟ್ಟು ನಾಲ್ವರು ಮಹಿಳೆಯರ ಮೇಲೆ ದೌರ್ಜನ್ಯ ಎಸಗಿರುವ ಆರೋಪ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್ಐಟಿ ನಾಲ್ಕು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ.
ಡಿಎನ್ಎ ಪರೀಕ್ಷೆ ಮುಂದಾದ SIT
ತನಿಖೆ ವೇಳೆ ಎಸ್ಐಟಿ ಅಧಿಕಾರಿಗಳು ಸಂತ್ರಸ್ತೆಯರ ಬಟ್ಟೆಗಳನ್ನ ವಶಕ್ಕೆ ಪಡೆದಿದ್ದರು. ಜೊತೆಗೆ ಎಸ್ಐಟಿ ಅಧಿಕಾರಿಗಳು ಬಸವನಗುಡಿ ಹಾಗೂ ಹೊಳೆನರಸೀಪುರ ಮನೆಗಳಲ್ಲಿ, ತೋಟದ ಮನೆಯಲ್ಲಿ ಪ್ರಜ್ವಲ್ ರೇವಣ್ಣ ಬಳಸಿದ್ದ ಬೆಡ್ ಶೀಟ್ಗಳನ್ನ ವಶಕ್ಕೆ ಪಡೆದಿದ್ದರು. ಇದೀಗ ಈ ಎಲ್ಲ ವಸ್ತುಗಳಲ್ಲಿ ಸಿಕ್ಕ ವೀರ್ಯ ಹಾಗೂ ಕೂದಲಿನ ಮಾದರಿಯನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ. ಇದರ ವರದಿಗಾಗಿ ಎಸ್ಐಟಿ ತಂಡ ಕಾಯುತ್ತಿದೆ. ಎಸ್ಐಟಿ ಈ ಹಿಂದೆ ಪ್ರಜ್ವಲ್ ರೇವಣ್ಣ ಅವರನ್ನು ಡಿಎನ್ ಪರೀಕ್ಷೆಗೆ ಒಳಪಡಿಸಿತ್ತು. ವರದಿ ಬಂದ ಕೂಡಲೇ ಪ್ರಜ್ವಲ್ ಡಿಎನ್ಎಗೆ ಹೋಲಿಕೆ ಮಾಡಲಾಗುತ್ತೆ. ಎರಡೂ ಹೋಲಿಕೆಯಾದರೆ ಪ್ರಜ್ವಲ್ ರೇವಣ್ಣ ಅವರಿಗೆ ದೊಡ್ಡ ಸಂಕಷ್ಟ ಎದುರಾಗಲಿಗೆ.