ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಮೈಸೂರು: ಕಲುಷಿತ ನೀರು ಸೇವಿಸಿ ಓರ್ವ ಸಾವು, 12 ಜನ ಅಸ್ವಸ್ಥ
ಮೈಸೂರು, ಸೆಪ್ಟೆಂಬರ್ 11: ಕಲುಷಿತ ನೀರು ಸೇವಿಸಿ 12 ಜನ ವಾಂತಿ, ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದೇಗೌಡ (65 ವರ್ಷ) ಮೃತದುರ್ದೈವಿ. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ ನರಳಾಡುತ್ತಿದ್ದಂತೆ ಸಾಲಿಗ್ರಾಮ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು.
ಮೃತ ಗೋವಿಂದೇಗೌಡ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗೋವಿಂದೇಗೌಡ ಮೃತಪಟ್ಟಿದ್ದಾರೆ. ತಾಲೂಕು ಆಸ್ಪತ್ರೆಯ ವೈದ್ಯರು ಬೆಟ್ಟಹಳ್ಳಿ ಗ್ರಾಮಕ್ಕೆ ಭೇಟಿ ಜನರ ಆರೋಗ್ಯ ಪರೀಕ್ಷೆ ನಡೆಸಿದರು.