``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಅರವಿಂದ್ ಕೇಜ್ರಿವಾಲ್​ಗೆ ಜಾಮೀನು ಸಿಕ್ಕಿದೆ ಆದ್ರೂ ಯಾವ ಕಡತಗಳಿಗೂ ಸಹಿ ಹಾಕುವಂತಿಲ್ಲ

ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)​ಗೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್​ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ ಮತ್ತು ಅವರು ಯಾವುದೇ ಸಾಕ್ಷಿಗಳೊಂದಿಗೆ ಮಾತನಾಡುವುದಿಲ್ಲ. ಅಗತ್ಯ ಬಿದ್ದರೆ ವಿಚಾರಣಾ ನ್ಯಾಯಾಲಯಕ್ಕೂ ಹಾಜರಾಗಬೇಕಾಗುತ್ತದೆ.

ಈ ಜಾಮೀನು ಅವಧಿಯಲ್ಲಿ ಮದ್ಯನೀತಿ ಹಗರಣ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವಂತಿಲ್ಲ. ಇಡಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್‌ಗೆ ನೀಡಿರುವ ಮಧ್ಯಂತರ ಜಾಮೀನಿಗೆ ಅನ್ವಯವಾಗುವ ಷರತ್ತುಗಳು ಸಿಬಿಐ ಪ್ರಕರಣದಲ್ಲಿಯೂ ಅನ್ವಯವಾಗುತ್ತವೆ.

ಇದಲ್ಲದೆ 50,000ರೂ. ಬಾಂಡ್, ಈ ಪ್ರಕರಣದ ಬಗ್ಗೆ ಸಾರ್ವಜನಿಕವಾಗಿ ಯಾವುದೇ ಹೇಳಿಕೆಗಳನ್ನು ನೀಡಬಾರದು ಮತ್ತು ಸಾಕ್ಷಿಗಳೊಂದಿಗೆ ಮಾತುಕತೆ ನಡೆಸಬಾರದು ಎಂದು ಕೇಜ್ರಿವಾಲ್ ಗೆ ಷರತ್ತು ವಿಧಿಸಲಾಗಿದೆ.

ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಮತ್ತು ನ್ಯಾ. ಸೂರ್ಯ ಕಾಂತ್ ಅವರ ದ್ವಿಸದಸ್ಯ ಪೀಠವು, ದಿಲ್ಲಿ ಸಿಎಂ ಮತ್ತು ಎಎಪಿ ನಾಯಕ ಕೇಜ್ರಿವಾಲ್ ಗೆ 6 ತಿಂಗಳ ಜೈಲುವಾಸವದ ನಂತರ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ಅರವಿಂದ್ ಕೇಜ್ರಿವಾಲ್ ಅವರನ್ನು ಮಾರ್ಚ್ 21 ರಂದು ಮದ್ಯದ ಹಗರಣದಲ್ಲಿ ಬಂಧಿಸಲಾಗಿತ್ತು. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮೇ 10ರಂದು ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು. ಇದಾದ ಬಳಿಕ ಕೇಜ್ರಿವಾಲ್ ಜೂನ್ 2ರಂದು ಶರಣಾಗಿದ್ದರು. ಈ ಪ್ರಕರಣದಲ್ಲಿ ಇಡಿ ಮತ್ತು ಸಿಬಿಐ ಎರಡೂ ತನಿಖೆ ನಡೆಸುತ್ತಿವೆ. ಜುಲೈ 12 ರಂದು ಇಡಿ ಪ್ರಕರಣದಲ್ಲಿ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದರು. ಇದೀಗ ಸಿಬಿಐ ಪ್ರಕರಣದಲ್ಲೂ ಜಾಮೀನು ಪಡೆದಿದ್ದಾರೆ.

ಸುಪ್ರೀಂ ಕೋರ್ಟ್‌ನ ಲಿಖಿತ ಆದೇಶವನ್ನು ದೆಹಲಿಯ ರೋಸ್ ಅವೆನ್ಯೂ ಕೋರ್ಟ್‌ಗೆ ಕಳುಹಿಸಲಾಗುತ್ತದೆ. ಜಾಮೀನು ಬಾಂಡ್ ಅನ್ನು ಇಲ್ಲಿ ತುಂಬಬೇಕಾಗುತ್ತದೆ. ಇದರ ನಂತರ, ರೋಸ್ ಅವೆನ್ಯೂ ನ್ಯಾಯಾಲಯವು ಬಿಡುಗಡೆ ಆದೇಶವನ್ನು ಸಿದ್ಧಪಡಿಸುತ್ತದೆ ಮತ್ತು ಅದನ್ನು ತಿಹಾರ್ ಆಡಳಿತಕ್ಕೆ ಕಳುಹಿಸುತ್ತದೆ. ಬಿಡುಗಡೆ ಆದೇಶ ಬಂದ ನಂತರವೇ ಕೇಜ್ರಿವಾಲ್ ಜೈಲಿನಿಂದ ಹೊರಬರಲು ಸಾಧ್ಯವಾಗುತ್ತದೆ.

ಸಿಸೋಡಿಯಾ ಅವರನ್ನು 26 ಫೆಬ್ರವರಿ 2023 ರಂದು ಬಂಧಿಸಲಾಯಿತು. ದೆಹಲಿಯಲ್ಲಿ ಹೊಸ ಮದ್ಯ ನೀತಿ ಜಾರಿಯಾದಾಗ ಅಬಕಾರಿ ಇಲಾಖೆ ಸಿಸೋಡಿಯಾ ಜೊತೆಗಿತ್ತು. ಅಬಕಾರಿ ಸಚಿವರಾಗಿದ್ದಾಗ ಸಿಸೋಡಿಯಾ ಅವರು ಅನಿಯಂತ್ರಿತ ಮತ್ತು ಏಕಪಕ್ಷೀಯ ನಿರ್ಧಾರಗಳನ್ನು ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿದೆ. ಆಗಸ್ಟ್ 9 ರಂದು ಸಿಸೋಡಿಯಾಗೆ ಜಾಮೀನು ನೀಡಲಾಗಿತ್ತು.

ಬಿಆರ್‌ಎಸ್ ನಾಯಕಿ ಕೆ. ಕವಿತಾರನ್ನು ಮಾರ್ಚ್ 15 ರಂದು ಬಂಧಿಸಲಾಗಿತ್ತು. ಆಮ್ ಆದ್ಮಿ ಪಕ್ಷದ ನಾಯಕರಿಗಾಗಿ ಸೌತ್ ಗ್ರೂಪ್ ವಿಜಯ್ ನಾಯರ್ ಮತ್ತು ಇತರರಿಗೆ 100 ಕೋಟಿ ರೂಪಾಯಿ ಲಂಚ ನೀಡಿದೆ ಎಂದು ಇಡಿ ಹೇಳಿಕೊಂಡಿದೆ. ಕವಿತಾ ಈ ಸೌತ್ ಗುಂಪಿನ ಭಾಗವಾಗಿದ್ದರು. ಆಗಸ್ಟ್ 27 ರಂದು ಸುಪ್ರೀಂ ಕೋರ್ಟ್ ಅವರಿಗೆ ಜಾಮೀನು ನೀಡಿತ್ತು.

ಆಮ್ ಆದ್ಮಿ ಪಕ್ಷದ ಸಂಸದ ಸಂಜಯ್ ಸಿಂಗ್ ಅವರನ್ನು ಕಳೆದ ವರ್ಷ ಅಕ್ಟೋಬರ್ 4 ರಂದು ಇಡಿ ಬಂಧಿಸಿತ್ತು. ಆಮ್ ಆದ್ಮಿ ಪಕ್ಷದ ಆರೋಪಿಗಳಿಂದ 2 ಕೋಟಿ ರೂಪಾಯಿ ಲಂಚ ಪಡೆದ ಆರೋಪ ಸಂಜಯ್ ಸಿಂಗ್ ಮೇಲಿತ್ತು. ಈ ವರ್ಷ ಏಪ್ರಿಲ್ 2 ರಂದು ಸಂಜಯ್ ಸಿಂಗ್ ಸುಪ್ರೀಂ ಕೋರ್ಟ್‌ನಿಂದ ಜಾಮೀನು ಪಡೆದಿದ್ದರು.

No Comments

Leave A Comment