``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಮತ್ತೆ ನಂದಿನಿ ಹಾಲಿನ ದರ ಹೆಚ್ಚಳ: ಮಾಗಡಿಯಲ್ಲಿ ಸಿಎಂ ಸಿದ್ದರಾಮಯ್ಯ ಸುಳಿವು

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾತನಾಡಿದ್ದಾರೆ.

ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಂದಿನ ಹಾಲಿನ ದರ ಹೆಚ್ಚಳ ಮಾಡುತ್ತೇವೆ. ಈ ಹೆಚ್ಚಳ ಮಾಡಿದ ಹಾಲಿನ ದರ ನೇರವಾಗಿ ರೈತರಿಗೆ ಹೋಗಬೇಕು ಎಂದರು.

ನಂದಿನ ಹಾಲಿನ ದರವನ್ನು ಹೆಚ್ಚಿಸುವ ಪ್ರಸ್ತಾವನೆ ಸರ್ಕಾರದ ಮುಂದಿದೆ. ಹಾಲಿನ ದರ ಹೆಚ್ಚಳ ಸಂಬಂಧ ಸಭೆ ಕರೆದು ಮಾತುಕತೆ ನಡೆಸಿ ಹೆಚ್ಚಳ ಮಾಡೋಣ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದೇ ವೇಳೆ ಹಾಲಿನ ದರ ಹೆಚ್ಚಳ ಮಾಡಿದಾಗ ಟೀಕಿಸುವ ಜೆಡಿಎಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, “ನೀವು(ಜೆಡಿಎಸ್ ನಾಯಕರು) ರೈತರ ಮಕ್ಕಳು ಎಂದು ಹೇಳಿಕೊಳ್ಳುತ್ತೀರಿ. ಆದರೆ, ನೀವು ಯಾರಾದರೂ ರೈತರಿಗೆ ಏನಾದರೂ ಮಾಡಿದ್ದೀರಾ ಎಂದು ಪ್ರಶ್ನೆ ಮಾಡಿದರು. ಏನೂ ಮಾಡದೇ ನಾವು ರೈತರ ಮಕ್ಕಳು ಅಂತ ಹೇಳಿಕೊಳ್ಳುತ್ತೀರಿ. ನಾವು ಹಾಲಿನ ದರ 3 ರೂ. ಹೆಚ್ಚಳ ಮಾಡಿ ಅದರ ಲಾಭವನ್ನು ರೈತರಿಗೆ ವರ್ಗಾಯಿಸಲು ಮುಂದಾದರೆ ಅದನ್ನು ವಿರೋಧಿಸುತ್ತೀರಿ” ಎಂದು ಟೀಕಿಸಿದರು.

ನಾನು ಹಿಂದೆ ಮುಖ್ಯಮಂತ್ರಿ ಆಗಿದ್ದಾಗ ಕೆಂಪೇಗೌಡರ ಜಯಂತಿ ಆಚರಣೆ ಮಾಡಿದ್ದು ನಮ್ಮ ಸರ್ಕಾರ. ಬಹಳಷ್ಟು ಒಕ್ಕಲಿಗ ನಾಯಕರು ಅನಿಸಿಕೊಂಡವರು ಮಾಡಲಿಲ್ಲ ಎಂದು ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಅವರಿ ಸಿಎಂ ಟಾಂಗ್​ ನೀಡಿದರು.

No Comments

Leave A Comment