ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೆಹಲಿ: ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ : ಆರು ಮಂದಿ ಮೃತ್ಯು : ಮೂವರು ಗಾಯ

ಹೊಸದಿಲ್ಲಿ: ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಇಂದ (ಸೆ.15) ಬೆಳಗ್ಗೆ ಕಾರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದ ಪರಿಣಾಮ ಕನಿಷ್ಠ ಆರು ಯಾತ್ರಾರ್ಥಿಗಳು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೈಪುರ ರಾಷ್ಟ್ರೀಯ ಹೆದ್ದಾರಿಯ ಹಿಂದೋಲಿ ಬಳಿ ಮುಂಜಾನೆ 4:30 ರ ಸುಮಾರಿಗೆ ಉತ್ತರ ಪ್ರದೇಶದ ದೇವಾಸ್ ನಿವಾಸಿಗಳು ಸಿಕಾರ್ ಜಿಲ್ಲೆಯ ಖತು ಶ್ಯಾಮ್ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಲು ಹೋಗುತ್ತಿದ್ದಾಗ ಅಪಘಾತ ನಡೆದಿದೆ.

“ಮಾರುತಿ ಸುಜುಕಿ ಇಕೋ ಕಾರಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಆರು ಜನರು ಸಾವನ್ನಪ್ಪಿದ್ದಾರೆ” ಎಂದು ಬುಂಡಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಉಮಾ ಶರ್ಮಾ ಹೇಳಿದ್ದಾರೆ.

“ನಾವು ಅಪರಿಚಿತ ವಾಹನವನ್ನು ಪತ್ತೆಹಚ್ಚಲು ತಂಡಗಳನ್ನು ರಚಿಸಿದ್ದೇವೆ” ಎಂದು ಅವರು ತಿಳಿಸಿದರು.

ಮೃತ ಪಟ್ಟವರನ್ನು ಗುರುತಿಸಲು ಪ್ರಯತ್ನಿಸುತ್ತಿದ್ದೇವೆ ಎಂದು ಹಿರಿಯ ಪೊಲೀಸ್ ಅಧಿಕಾರಿ ಹೇಳಿಕೆ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

No Comments

Leave A Comment