ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ಕುಂದಾಪುರ: ಜಾನುವಾರು ಕಳ್ಳತನ ಪ್ರಕರಣ : ಇಬ್ಬರು ಅರೆಸ್ಟ್
ಕುಂದಾಪುರ: ಸಮೀಪದ ಗಂಗೊಳ್ಳಿ ಠಾಣಾ ವ್ಯಾಪ್ತಿಯಲ್ಲಿ ಜಾನುವಾರು ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಆರೋಪಿಗಳನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತ ಆರೋಪಿಗಳು ಮೊಹಮ್ಮದ್ ಸೀನಾನ್(19), ಹಾಗೂ ಇನ್ನೋರ್ವ ಬಾಲಕ ಎಂದು ತಿಳಿದು ಬಂದಿದೆ.
ಪ್ರಕರಣದ ವಿವರ:
ಗಂಗೊಳ್ಳಿ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ: 94/2024 ಕಲಂ. 303(2) BNS. ಮತ್ತು ಕಲಂ. 4, 5, 12 The Karnataka Prevention of Slaughter and Prevention of cattle Ordiance 2020 and 11(1)(d) Prevention of cruelty ti animals act 1960 ರಂತೆ ಪ್ರಕರಣ ದಾಖಲಾಗಿದ್ದು, ಠಾಣಾ ವ್ಯಾಪ್ತಿಯ ಗುಜ್ಜಾಡಿ ಗ್ರಾಮದ ನಾಯಕವಾಡಿ ಹತ್ತೀರ ಜಾನುವಾರು ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗಂಗೊಳ್ಳಿ ಪೊಲೀಸ್ ಠಾಣಾ ಪಿ ಎಸ್ ಐ ರವರಾದ ಹರೀಶ್ ಮತ್ತು ಬಸವರಾಜ ಕನಶೆಟ್ಟಿ ಹಾಗೂ ಸಿಬ್ಬಂದಿಗಳಾದ ರಾಜು, ಶಾಂತರಾಮ ಹಾಗೂ ರಾಘವೇಂದ್ರರವರು ಆರೋಪಿಗಳ ಪತ್ತೆಯ ಬಗ್ಗೆ ಮಾಹಿತಿ ಪಡೆದುಕೊಂಡು ದಿನಾಂಕ 14.09.2024 ರಂದು ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕು ಗುಲ್ವಾಡಿ ಎಂಬಲ್ಲಿ ಪ್ರಕರಣದ ಆರೋಪಿ ಮೊಹಮ್ಮದ್ ಸೀನಾನ್ ಎಂಬಾತನನ್ನು ವಶಕ್ಕೆ ಪಡೆದು ದಸ್ತಗಿರಿ ಮಾಡಿ, ಆತನನ್ನು ವಿಚಾರಿಸಿದಾಗ ಮೊಹಮ್ಮದ್ ಸೀನಾನ್(19), ಗುಲ್ವಾಡಿ ಗ್ರಾಮ ಕುಂದಾಪುರ ತಾಲೂಕು ಹಾಗೂ ಇನ್ನೊರ್ವ ಕಾನೂನು ಸಂಘರ್ಷಕ್ಕೋಳಗಾದ ಬಾಲಕನನ್ನು ವಶಕ್ಕೆ ಪಡೆದು ವಿಚಾರಿಸಿದಾಗ ಕೃತ್ಯ ಎಸಗಿರುವುದನ್ನು ಒಪ್ಪಿಕೊಂಡಿದ್ದು, ಆರೋಪಿಯು ಕೃತ್ಯಕ್ಕೆ ಬಳಸಿದ ಮಾರುತಿ ಸುಜುಕಿ ರಿಡ್ಜ್ ಕಾರು ನಂಬ್ರ KA05MM4690 (ಅಂದಾಜು ಮೌಲ್ಯ 3 ಲಕ್ಷ ರೂ)ನ್ನು ಸ್ವಾಧೀನ ಪಡಿಸಿ ಕೊಳ್ಳಲಾಗಿದ್ದು, 3 ಜಾನುವಾರಗಳನ್ನು ರಕ್ಷಿಸಿ ನೆoಚಾರು ಗೋಶಾಲೆಗೆ ಬಿಡಲಾಗಿದೆ. ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.