ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನವೆ೦ಬರ್ 13ರ೦ದು ವಿಶ್ವರೂಪದರ್ಶನ ಕಾರ್ಯಕ್ರಮವು ಬೆಳಿಗ್ಗೆ 5ಗ೦ಟೆಗೆ ಜರಗಿತು.ನವೆ೦ಬರ್ 18ಹಾಗೂ 19ರ೦ದು ಲಕ್ಷ ದೀಪೋತ್ಸವವು ಜರಗಲಿದೆ.

ಇನ್ನು ಮುಂದೆ ಸಂಚಾರ ನಿಯಮ ಉಲ್ಲಂಘಿಸಿದರೆ ಡಿಎಲ್‌ ಅಮಾನತು

ಮಂಗಳೂರು: ಇನ್ನು ಮುಂದೆ  ಸಂಚಾರ ನಿಯಮ ಉಲ್ಲಂಘಿಸುವ ಮೊದಲು ವಾಹನ ಚಾಲಕರು ಸಾಕಷ್ಟು ಚಿಂತಿಸಬೇಕಾಗಿದೆ. ಸಿಕ್ಕಿಬಿದ್ದರೆ ದಂಡ ಪಾವತಿಸಿ ಸುಮ್ಮನಾಗಬಹುದು ಎಂದು ಭಾವಿಸಿದ್ದರೆ ಆಪಾಯ ಖಚಿತ. ಯಾಕೆಂದರೆ ಪೊಲೀಸರು  ಇಂಥವರ ಚಾಲನಾ ಪರವಾನಿಗೆಯನ್ನು ಅಮಾನತು ಮಾಡುವ ಕ್ರಮಕ್ಕೆ ಮುಂದಾಗಿದ್ದಾರೆ ಎಂದು ವರದಿಯಾಗಿದೆ.

ಸಂಚಾರ ನಿಯಮ ಉಲ್ಲಂಘನೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪೊಲೀಸರು “ಡಿಎಲ್‌ ಅಮಾನತು’  ಅಸ್ತ್ರವನ್ನು ಹೆಚ್ಚಾಗಿ ಪ್ರಯೋಗಿಸಲು ಮುಂದಾಗಿದ್ದಾರೆ.  ದ.ಕ. ಮಾತ್ರವಲ್ಲದೆ ಉಡುಪಿ ಜಿಲ್ಲೆಯ ಪೊಲೀಸರು ಕೂಡ “ಡಿಎಲ್‌ ಅಮಾನತು’ಗೆ ಹೆಚ್ಚು ಆದ್ಯತೆ ನೀಡುತ್ತಿದ್ದು, ಒಂದು ವರ್ಷದಲ್ಲಿ ಸಾವಿರಕ್ಕೂ ಅಧಿಕ ಡಿಎಲ್‌ಗ‌ಳನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ತಿಳಿದು ಬಂದಿದೆ.

ಯಾವುದೇ ರೀತಿಯ ವಾಹನ ಸಂಚಾರ ನಿಯಮ ಉಲ್ಲಂಘನೆಯಾದರೂ ಡಿಎಲ್‌ ಅಮಾನತಿಗೆ ಪೊಲೀಸರು ಪ್ರಾದೇಶಿಕ ಸಾರಿಗೆ ಆಯುಕ್ತರಿಗೆ ಶಿಫಾರಸು ಮಾಡಬಹುದಾಗಿದೆ.

ದ.ಕ. ಜಿಲ್ಲಾ ಪೊಲೀಸ್‌, ಮಂಗಳೂರು ಪೊಲೀಸ್‌ ಕಮಿಷನರೆಟ್‌ ಹಾಗೂ ಉಡುಪಿ ಜಿಲ್ಲಾ ಪೊಲೀಸ್‌ ವ್ಯಾಪ್ತಿಯಲ್ಲಿ ಹೆಚ್ಚಾಗಿ ಮದ್ಯ ಸೇವಿಸಿ ವಾಹನ ಚಾಲನೆ, ಅಪಘಾತದಿಂದ ಸಾವು ಸಂಭವಿಸುವಂಥ ಗಂಭೀರ ಪ್ರಕರಣಗಳು, ಅತಿವೇಗ ಮತ್ತು ನಿರ್ಲಕ್ಷ್ಯದ ಚಾಲನೆ, ಏಕಮುಖೀ ರಸ್ತೆಯಲ್ಲಿ ವಿರುದ್ಧ ದಿಕ್ಕಿನಲ್ಲಿ ಸಂಚರಿಸುವುದು, ಪದೇಪದೆ ಸಂಚಾರ ನಿಯಮ ಉಲ್ಲಂ ಸುವುದು ಮುಂತಾದ ಪ್ರಕರಣಗಳಲ್ಲಿ ಡಿಎಲ್‌ ಅಮಾನತು ಮಾಡಲಾಗುತ್ತಿದೆ ಎಂದು ತಿಳಿಯಲಾಗಿದೆ.

No Comments

Leave A Comment