ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ: ಚಾರಿತ್ರಿಕ ಮಾನವ ಸರಪಳಿ, ಸಿಎಂ ಸಿದ್ದರಾಮಯ್ಯ ಚಾಲನೆ

ಬೆಂಗಳೂರು: ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಸಮಾನತೆ, ಐಕ್ಯತೆ, ಸಾಮರಸ್ಯ, ಸಾಮಾಜಿಕ ನ್ಯಾಯವನ್ನು ಬಿಂಬಿಸುವ ಐತಿಹಾಸಿಕ ಜಗತ್ತಿನ ಅತಿ ಉದ್ದದ ಮಾನವ ಸರಪಳಿ ರಚನೆ ಮೂಲಕ ದಾಖಲೆ ಸೃಷ್ಟಿಸಲಾಯಿತು.

ಬೀದರ್ ನಿಂದ ಚಾಮರಾಜನಗರದವರೆಗೂ 31 ಜಿಲ್ಲೆಗಳನ್ನೊಳಗೊಂಡ 2,500 ಕಿ.ಮೀ ಉದ್ದದ ಮಾನವ ಸರಪಳಿಯನ್ನು ವಿವಿಧ ನಾಗರಿಕ ಸಂಘಟನೆಗಳ ಸಹಯೋಗದಲ್ಲಿ ಕರ್ನಾಟಕ ಸರ್ಕಾರದಿಂದ ಆಯೋಜಿಸಲಾಗಿತ್ತು.

ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂವಿಧಾನ ಪೀಠಿಕೆ ಓದುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಮಾಜ ಕಲ್ಯಾಣ ಸಚಿವ ಡಾ. ಹೆಚ್. ಸಿ. ಮಹಾದೇವಪ್ಪ, ಸಭಾಪತಿ ಬಸವರಾಜ ಹೊರಟ್ಟಿ ಮತ್ತಿತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಸಂವಿಧಾನದ ಪೀಠಿಕೆಯಲ್ಲಿ ಅತ್ಯಂತ ದೊಡ್ಡ ಮೌಲ್ಯಗಳಿವೆ. ಹೀಗಾಗಿಯೇ ಪ್ರತಿ ದಿನ ಶಾಲಾ ಕಾಲೇಜುಗಳಲ್ಲಿ ಇದನ್ನು ಓದಿಸುವ, ಅರ್ಥೈಸುವ, ಪಾಲಿಸುವ ಪ್ರಯತ್ನ‌ ಮುನ್ನಡೆಸಿದ್ದೇವೆ.

ನಮ್ಮ ರಾಷ್ಟ್ರಗೀತೆ ಮತ್ತು ನಮ್ಮ‌ ನಾಡಗೀತೆಯಲ್ಲಿರುವ ಭಾರತ ಮತ್ತು ಕರ್ನಾಟಕ ನಮ್ಮದಾಗಬೇಕು. ಯಾವುದೇ ತಾರತಮ್ಯ ಇಲ್ಲದ ಶಾಂತಿಯ ತೋಟ ನಮ್ಮದಾಗಬೇಕು.

ಈ ವೇಳೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಏಕತೆ ನೆಪದಲ್ಲಿ ಸಮಾಜವನ್ನು ಒಡೆಯುವ, ಮನುಷ್ಯರನ್ನು ವಿಭಜಿಸುವ ವಿಚ್ಛಿದ್ರಕಾರಕ ದುಷ್ಟ ಶಕ್ತಿಗಳನ್ನು ನಾಶ ಮಾಡಲು ಪ್ರಜಾಪ್ರಭುತ್ವವಾದಿಗಳು ಎದ್ದುನಿಲ್ಲಿ.

ನಮ್ಮ ಸಂವಿಧಾನ ಎತ್ತಿ ಹಿಡಿದಿರುವ ಬಹುತ್ವವನ್ನು ನಾವು ಬದುಕಿನಲ್ಲಿ ಆಚರಿಸೋಣ. ಆ ಮೂಲಕ ಸಮಾಜ ಒಡೆಯುವ ದುಷ್ಟರ ಷಡ್ಯಂತ್ರ ಸೋಲಿಸೋಣ. ಪ್ರಜಾಪ್ರಭುತ್ವ ಗಟ್ಟಿಗೊಳಿಸೋಣ ಎಂದು ಕರೆ ನೀಡಿದರು.

ಏಕತೆ ಭಜನೆ ಮಾಡುವ ವಿಚ್ಚಿದ್ರಕಾರಕ ದುಷ್ಟ ಶಕ್ತಿಗಳು ಸಾಮಾಜಿಕ ನ್ಯಾಯ, ಸಮಾನತೆಯ ವಿರೋಧಿಗಳು. ಇವರು ಸಮಾಜದ ಶತ್ರುಗಳು. ಇವರನ್ನು ಮೆಟ್ಟಿ ನಿಲ್ಲದ ಹೊರತು ಮಹಿಳೆಯರ, ದಲಿತರ, ಹಿಂದುಳಿದವರಿಗೆ ಹಕ್ಕುಗಳು, ಅವಕಾಶಗಳು ಸಿಗಲು ಸಾಧ್ಯವಾಗುವುದಿಲ್ಲ. ಈ ಬಿಜೆಪಿ ಮತ್ತು ಇವರ ಜೊತೆಗಿರುವ ವಿಚ್ಚಿದ್ರಕಾರಕ ಶಕ್ತಿಗಳು ಬಡವರ, ಮಧ್ಯಮ ವರ್ಗದ ವಿರೋಧಿಗಳು. ಇವರು ಬಡವರ ಪರವಾದ ಕಾರ್ಯಕ್ರಮಗಳು ಜಾರಿ ಆಗಲು ಬಿಡುವುದಿಲ್ಲ. ಆದ್ದರಿಂದ ಇವರನ್ನು ನಾವು ಸೋಲಿಸಬೇಕು.20 ಲಕ್ಷಕ್ಕೂ ಹೆಚ್ಚು ಮಂದಿಯ ಮಾನವ ಸರಪಳಿ ರಚಿಸಿರುವುದೇ ದುಷ್ಟಶಕ್ತಿಗಳಿಗೆ ಎಚ್ಚರಿಕೆ ನೀಡಿ ಮನುಷ್ಯ ಸಮಾಜವನ್ನು ಬೆಸೆಯುವುದಾಗಿದೆ ಎಂದು ಹೇಳಿದರು.

ಪ್ರಜಾಪ್ರಭುತ್ವ ದಿನದ ರಾಯಭಾರಿ ಹರೇಕಳ ಹಾಜಬ್ಬ, ಪೌರ ಕಾರ್ಮಿಕರಾದ ನಾಗಲಕ್ಷ್ಮಿ, ಮಂಜುಳ ಹಾಗೂ ತೃತೀಯ ಲಿಂಗಿ ಪ್ರಿಯಾಂಕ ಮತ್ತು ಇಬ್ಬರು ವಿಶೇಷ ಚೇತನ ವಿದ್ಯಾರ್ಥಿಗಳು ಇಲ್ಲಿ ಹಾಜರಿದ್ದು, ಈ ದಿನದ ಮೆರುಗು ಹೆಚ್ಚಿಸಿದರು.

ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ನೇತೃತ್ವದಲ್ಲಿ ನಡೆಯುತ್ತಿದೆ.ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸಚಿವರಾದ ಸತೀಶ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳಕರ ಮತ್ತಿತರರು ಮಾನವ ಸರಪಳಿಗೆ ಕೈ ಜೋಡಿಸಿದರು.

kiniudupi@rediffmail.com

No Comments

Leave A Comment