``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬಂಧನಕ್ಕೊಳಗಾದ ಮುನಿರತ್ನ ವೈದ್ಯಕೀಯ ಪರೀಕ್ಷೆ ಅಂತ್ಯ; ಅಶೋಕ್​​ನಗರ ಠಾಣೆಗೆ ಮಾಜಿ ಸಚಿವ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜೀವ ಬೆದರಿಕೆ ಹಾಕಿ, ಜಾತಿ ನಿಂದನೆ ಮಾಡಿದ ಆರೋಪ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ನಾಯ್ಡು ಅವರನ್ನು ಪೊಲೀಸರು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದೆ.

ಇತ್ತೀಚಿನ ಮಾಹಿತಿಯ ಪ್ರಕಾರ ವೈದ್ಯಕೀಯ ತಪಾಸಣೆ ಮುಕ್ತಾಯಗೊಂಡಿದ್ದು ಮುನಿರತ್ನ ಅವರನ್ನು ಅಶೋಕ್​​ನಗರ ಠಾಣೆಗೆ ಕರೆತರಲಾಗಿದೆ.

ಕೋಲಾರದಿಂದ ಆಂಧ್ರದ ಚಿತ್ತೂರಿಗೆ ತೆರಳುತ್ತಿದ್ದ ಮುನಿರತ್ನ ಅವರನ್ನು ಮೊಬೈಲ್ ಫೋನ್ ಲೊಕೇಷನ್ ಆಧರಿಸಿ ಪತ್ತೆ ಮಾಡಿ ಬಂಧಿಸಲಾಗಿತ್ತು.

ಗುತ್ತಿಗೆದಾರ ಚಲುವರಾಜು ಎಂಬವರು ಶಾಸಕ ಮುನಿರತ್ನ ನನಗೆ ಕೊಲೆ ಬೆದರಿಕೆ, ಜಾತಿ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದಗೆ ದೂರು ನೀಡಿದ್ದರು.

ಮುನಿರತ್ನ ಅವರ ವಿರುದ್ಧ ಎರಡು ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ಬಿಬಿಎಂಪಿ(ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ) ಗುತ್ತಿಗೆದಾರ ಚೆಲುವರಾಜು ಅವರು ದಾಖಲಿಸಿದ ಮೊದಲ ಎಫ್‌ಐಆರ್‌ನಲ್ಲಿ, ಶಾಸಕರು 30 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟಿದ್ದಾರೆ ಮತ್ತು ಮೊತ್ತವನ್ನು ಪಾವತಿಸದಿದ್ದರೆ ತನ್ನ ಗುತ್ತಿಗೆಯನ್ನು ರದ್ದುಗೊಳಿಸುವುದಾಗಿ ಬೆದರಿಕೆ ಹಾಕಿರುವ ಆರೋಪವಿದೆ.

No Comments

Leave A Comment