ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಗಣೇಶ ವಿಸರ್ಜನೆ ವೇಳೆ ತಂದೆ-ಮಗ ಸೇರಿ ಮೂವರು ನೀರುಪಾಲು
ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಾರಸಂದ್ರ ಗ್ರಾಮ ಸಮೀಪದ ರಂಗನಹಟ್ಟಿ ಕೆರೆಯಲ್ಲಿ ಗಣೇಶ ವಿಸರ್ಜನೆ ವೇಳೆ ತಂದೆ, ಮಗ ಸೇರಿ ಮೂವರು ಸಾವನ್ನಪ್ಪಿರುವಂತಹ ದುರ್ಘಟನೆ ಸಂಭವಿಸಿದೆ.
ಮೃತರನ್ನು ತಂದೆ ರೇವಣ್ಣ (46) ಮಗ ಶರತ್ (26) ಹಾಗೂ ದಯಾನಂದ ಎಂದು ಗುರುತಿಸಲಾಗಿದೆ. ಗಣೇಶ ಮೂರ್ತಿ ವಿಸರ್ಜನೆಗೆ ತೆರಳಿದ್ದ ವೇಳೆ ಘಟನೆ ಸಂಭವಿಸಿದೆ.
ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಪೊಲೀಸರು ಮೃತದೇಹಗಳಿಗೆ ಶೋಧ ನಡೆಸಿದ್ದಾರೆ. ಘಟನಾ ಸ್ಥಳಕ್ಕೆ ದಂಡಿನಶಿವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.