ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಜಿಲ್ಲಾಧಿಕಾರಿಯ “ಎಕ್ಸ್” ಖಾತೆ ಹ್ಯಾಕ್ ಮಾಡಿ ರಾಹುಲ್ ಗಾಂಧಿ ವಿರುದ್ಧ ಪೋಸ್ಟ್ : ಆರೋಪಿ ಪೊಲೀಸ್ ವಶಕ್ಕೆ
ಹೊಸದಿಲ್ಲಿ : ಉತ್ತರ ಪ್ರದೇಶದ ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿಯವರ ಅಧಿಕೃತ ಎಕ್ಸ್ ಹ್ಯಾಂಡಲ್ ಖಾತೆಯನ್ನು ಹ್ಯಾಕ್ ಮಾಡಿದ ಆರೋಪದ ಮೇಲೆ ನೋಯ್ಡಾ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಹ್ಯಾಕ್ ಮಾಡಿದ್ದ ಖಾತೆಯಿಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ‘ಪಪ್ಪು’ ಎಂದು ಉಲ್ಲೇಖಿಸಿ ಆಕ್ಷೇಪಾರ್ಹ ಪೋಸ್ಟ್ ಮಾಡಲಾಗಿತ್ತು.
ಆರೋಪಿಯನ್ನು 34 ವರ್ಷದ ಸೋಹನ್ ಸಿಂಗ್ ಎಂದು ಗುರುತಿಸಲಾಗಿದೆ. ಆರೋಪಿಯ ಮೊಬೈಲ್ ಫೋನ್ ಪೊಲೀಸರು ವಶಪಡಿಸಿಕೊಂಡಿದ್ದಾರೆ.
“ಗೌತಮ್ ಬುದ್ಧ ನಗರ ಜಿಲ್ಲಾಧಿಕಾರಿಯವರ ಅಧಿಕೃತ ಎಕ್ಸ್ ಖಾತೆಯನ್ನು ಹ್ಯಾಕ್ ಮಾಡಿ, ರಾಜಕೀಯ ಟೀಕೆಗಳನ್ನು ಮಾಡಿದ ಆರೋಪದ ಮೇಲೆ ನೋಯ್ಡಾ ಸೆಕ್ಟರ್ 20 ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ” ಎಂದು ನೋಯ್ಡಾ ಪೊಲೀಸರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.