ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಸೆ. 30 ರವರೆಗೆ ದರ್ಶನ್ ಆ್ಯಂಡ್ ಗ್ಯಾಂಗ್ ನ್ಯಾಯಾಂಗ ಬಂಧನ ವಿಸ್ತರಣೆ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿತರಾಗಿರುವ ನಟ ದರ್ಶನ್ ಮತ್ತು ಇತರೆ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯು ಸೆಪ್ಟೆಂಬರ್ 30ರವರೆಗೂ ವಿಸ್ತರಣೆಯಾಗಿದೆ.
ಕೊಲೆ ಕೇಸ್ ಆರೋಪ ಪಟ್ಟಿ ಸಲ್ಲಿಕೆಯಾದ ಬಳಿಕ ನ್ಯಾಯಾಲಯ ದರ್ಶನ್, ಪವಿತ್ರಗೌಡ ಸೇರಿದಂತೆ ಎಲ್ಲಾ 17 ಆರೋಪಿಗಳನ್ನು ಸೆಪ್ಟೆಂಬರ್ 12 ರವರೆಗೆ ಆ ಬಳಿಕ ಸೆಪ್ಟೆಂಬರ್ 17 ವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿತ್ತು.
ಇಂದು ಕಸ್ಟಡಿ ಅಂತ್ಯವಾದ ಹಿನ್ನಲೆಯಲ್ಲಿ ವಿವಿಧ ಕಾರಾಗೃಹಗಳಲ್ಲಿರುವ ಎಲ್ಲಾ ಆರೋಪಿಗಳನ್ನು ತಾವು ಇರುವ ಜೈಲಿನಿಂದಲೇ ವಿಡಿಯೋ ಕಾನ್ಪರೆನ್ಸ್ ಮೂಲಕ 24ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ವಿಚಾರಣೆಗೆ ಹಾಜರುಪಡಿಸಲಾಯಿತು.
ದರ್ಶನ್ ಪರ ವಾದ ಮಂಡಿಸಿದ ವಕೀಲರು, ಬೆನ್ನು ನೋವು ಇದೆ ಎಂದು ಹೇಳಿದರೂ ಚೇರ್ ಕೊಡುತ್ತಿಲ್ಲ. ಗೆಳೆಯರು, ಕುಟುಂಬಸ್ಥರ ಭೇಟಿಗೆ ಅವಕಾಶ ನೀಡುತ್ತಿಲ್ಲ ಎಂದು ನ್ಯಾಯಾಲಯದ ಗಮನಕ್ಕೆ ತಂದರು. ಈ ವೇಳೆ ನ್ಯಾಯಾಲಯಕ್ಕೆ ತಾಂತ್ರಿಕ ಸಾಕ್ಷ್ಯ ಜೊತೆಗೆ ಕೇಂದ್ರ ವಿಧಿ ವಿಜ್ಞಾನ ಪ್ರಯೋಗಾಲಯದ ಪರೀಕ್ಷಾ ( ಸಿಎಫ್ ಎಸ್ ಎಲ್) ವರದಿ ಸಲ್ಲಿಸಿದ ತನಿಖಾಧಿಕಾರಿಗಳು, ಕೆಲ ಸಾಕ್ಷ್ಯಗಳ ಸಂಗ್ರಹ ಆಗಬೇಕಾಗಿದೆ. ಪ್ರಕರಣದ 10ನೇ ಆರೋಪಿ ವಿನಯ್ ಮೊಬೈಲ್ ನ್ನು ಮತ್ತೆ ಎಫ್ ಎಸ್ ಎಲ್ ಪರೀಕ್ಷೆಗೆ ಕಳುಹಿಸಬೇಕಾಗಿದೆ ಎಂದು ಮನವಿ ಮಾಡಿದರು.
ಪೊಲೀಸರ ಮನವಿಗೆ ಒಪ್ಪಿಗೆ ಸೂಚಿಸಿದ ನ್ಯಾಯಾಲಯ ಆರೋಪಿಗಳ ನ್ಯಾಯಾಂಗ ಬಂಧನ ಅವಧಿಯನ್ನು ಸೆಪ್ಟೆಂಬರ್ 30 ರವರೆಗೂ ಮುಂದೂಡಿ ಆದೇಶ ಹೊರಡಿಸಿದರು.