ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ: ದಾಖಲಾಯ್ತು ಇನ್ನೊಂದು ಗಂಭೀರ ಪ್ರಕರಣ
ರಾಮನಗರ, ಸೆ.19: ಗುತ್ತಿಗೆದಾರನಿಗೆ ಜೀವ ಬೆದರಿಕೆ ಮತ್ತು ಜಾತಿನಿಂದನೆ ಮಾಡಿರುವ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ (Munirathna) ಅವರು ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಅವರ ವಿರುದ್ಧ ಒಕ್ಕಲಿಗ, ದಲಿತ ಸಂಘಟನೆಗಳು ಸರಣಿ ಪ್ರತಿಭಟನೆ ಮಾಡ್ತಿವೆ. ಕಾಂಗ್ರೆಸ್‌ಗೆ ಈ ಪ್ರಕರಣ ಅಸ್ತ್ರವಾಗಿ ಸಿಕ್ಕಿದೆ. ಆದರೆ ಇದೀಗ ಇದರ ನಡುವೆ ಮುನಿರತ್ನಗೆ ಮತ್ತೊಂದು ಕಂಟಕ ಎದುರಾಗಿದೆ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಬೆಂಗಳೂರು ಮೂಲದ ಮಹಿಳೆಯೊಬ್ರು ಮುನಿರತ್ನ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿ ದೂರು ದಾಖಲಿಸಿದ್ದಾರೆ.
R.R.ನಗರ ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಆರೋಪದಡಿ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಡಿವೈಎಸ್‌ಪಿ ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಹಾಜರಾಗಿ ಸಂತ್ರಸ್ತೆ 2 ಗಂಟೆಗೂ ಹೆಚ್ಚು ಕಾಲ ವಿವರಣೆ ನೀಡಿದ್ದಾರೆ. ಇಂದು ಸಂತ್ರಸ್ತೆ ಜೊತೆ ಪೊಲೀಸರು ಸ್ಥಳಮಹಜರು ನಡೆಸಲಿದ್ದಾರೆ. ಘಟನೆ ಸಂಬಂಧ ಶಾಸಕ ಮುನಿರತ್ನ ಸೇರಿ 7 ಜನರ ವಿರುದ್ಧ FIR ದಾಖಲಾಗಿದೆ. ಆರ್.ಆರ್.ನಗರ ಬಿಜೆಪಿ ಶಾಸಕ ಮುನಿರತ್ನ, ವಿಜಯ್ ಕುಮಾರ್, ಕಿರಣ್, ಲೋಹಿತ್, ಮಂಜುನಾಥ್, ಲೋಕಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ಖಾಸಗಿ ರೆಸಾರ್ಟ್ನಲ್ಲಿ ಅತ್ಯಾಚಾರ ಮಾಡಿ ಬೆದರಿಕೆ ಹಾಕಿದ್ದಾರೆ ಎಂದು DySP ದಿನಕರ್ ಶೆಟ್ಟಿ ಸಮ್ಮುಖದಲ್ಲಿ ಮಹಿಳೆ ಆರೋಪ ಮಾಡಿ ಹೇಳಿಕೆ ನೀಡಿದ್ದಾರೆ. 354 a, 354 c, 376(2), 308, 406, 384, 120b 504, 506, 149 IPC ಸೆಕ್ಷನ್ ಅಡಿ ಕೇಸ್ ದಾಖಲಾಗಿದೆ.
ಇನ್ನು ಅತ್ಯಾಚಾರ ಆರೋಪಿಗಳ ಪತ್ತೆಗಾಗಿ ರಾಮನಗರ ಎಸ್ಪಿ ಕಾರ್ತಿಕ್ ರೆಡ್ಡಿ ನೇತೃತ್ವದಲ್ಲಿ ವಿಶೇಷ ತಂಡ ರಚನೆ ಮಾಡಲಾಗಿದೆ. ಸಂತ್ರಸ್ತೆ ಉಲ್ಲೇಖಿಸಿರುವ ಸ್ಥಳಗಳನ್ನ ಪರಿಶೀಲಿಸುವ ವಿಶೇಷ ತಂಡ ರಚನೆಯಾಗಿದೆ. ಮತ್ತೊಂದೆಡೆ ಸಂತ್ರಸ್ಥೆ ವೈದ್ಯಕೀಯ ಪರೀಕ್ಷೆ ಮುಕ್ತಾಯಗೊಂಡಿದೆ. ಆರ್ ಆರ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ ನಡೆದಿದೆ.
ನಮಗೆ ದ್ವೇಷದ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ
ಘಟನೆ ಸಂಬಂಧ ಬೆಂಗಳೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ದೂರಿನ ಮೇಲೆ ಕಾನೂನಿನ ರೀತಿ ಕ್ರಮ ಆಗುತ್ತೆ. ಪಬ್ಲಿಕ್ ಸರ್ವೆಂಟ್ಸ್ ಈ ರೀತಿ ಮಾಡಿದ್ರೆ ಕಾನೂನಿನಡಿ ಕ್ರಮ ಇದೆ. ನಾವು ಯಾವುದೇ ದ್ವೇಷದ ರಾಜಕಾರಣ ಮಾಡುವುದಿಲ್ಲ. ಇನ್ನೂ ಬಿಜೆಪಿಯವರು ದ್ವೇಷದ ರಾಜಕಾರಣ ಮಾಡ್ತಿದ್ದಾರೆ. ನಮಗೆ ದ್ವೇಷದ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ಜನರು ನಮ್ಮನ್ನ ಗೆಲ್ಲಿಸಿದ್ದಾರೆ, ಅದರ ಪ್ರಕಾರ ಕೆಲಸ ಮಾಡ್ತಿದ್ದೇವೆ ಎಂದರು.
ವಿಚಾರಣಾಧೀನ ಕೈದಿಯಾಗಿರೋ ಮುನಿರತ್ನಗೆ ಗುತ್ತಿಗೆದಾರ ಚಲುವರಾಜು ದಾಖಲಿಸಿದ್ದ ವಂಚನೆ ಪ್ರಕರಣದಲ್ಲಿ ರಿಲೀಫ್ ಸಿಕ್ಕಿದೆ. ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಆದ್ರೆ ಜಾತಿ ನಿಂದನೆ ಕೇಸ್‌ನಲ್ಲಿ ಬಿಜೆಪಿ ಶಾಸಕ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿ ಭವಿಷ್ಯ ಇಂದು ನಿರ್ಧಾರವಾಗಲಿದೆ. ಕೋರ್ಟ್‌ನಲ್ಲಿ ವಾದ-ಪ್ರತಿವಾದ ಆಲಿಸಿದ ಕೋರ್ಟ್ ಆದೇಶ ಕಾಯ್ದಿರಿಸಿದ್ದು, ಇಂದು ಆದೇಶ ಪ್ರಕಟಿಸಲಿದೆ. ಜಾಮೀನು ಸಿಗದಿದ್ರೆ ಮುನಿರತ್ನೆಗೆ ಪರಪ್ಪನ ಅಗ್ರಹಾರ ಜೈಲೇ ಗತಿಯಾಗಲಿದೆ.