ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಶಿರೂರು ಗುಡ್ಡ ಕುಸಿತ: 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಪತ್ತೆಯಾಯ್ತು ಅರ್ಜುನ್ ಲಾರಿ

ಉತ್ತರ ಕನ್ನಡ, ಸೆ.21: ಜಿಲ್ಲೆಯ ಅಂಕೋಲಾ  ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಗುಡ್ಡ ಕುಸಿದು 11 ಜನ ಮಣ್ಣಿನಲ್ಲಿ ಕೊಚ್ಚಿ ಹೋಗಿದ್ದರು. ಅದರಲ್ಲಿ 8 ಜನರನ್ನು ಈಗಾಗಲೇ ಪತ್ತೆ ಮಾಡಿದ್ದು, ಇನ್ನುಳಿದ ಕೇರಳ ಮೂಲದ ಲಾರಿ ಚಾಲಕ ಅರ್ಜುನ್, ಶಿರೂರಿನ ಲೋಕೇಶ್ ನಾಯ್ಕ ಮತ್ತು ಜಗನ್ನಾಥ ನಾಯ್ಕ ಎಂಬುವವರಿಗಾಗಿ ಹುಡುಕಾಟ ನಡೆಸಲಾಗಿತ್ತು. ಇದೀಗ ಮೂರನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಅರ್ಜುನ್ ಲಾರಿ ಪತ್ತೆಯಾಗಿದೆ.

ಹೌದು, ದುರ್ಘಟನೆಯಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಅರ್ಜುನ್ ಲಾರಿ, ಇಂದು ನಡೆಸಿದ 3ನೇ ಹಂತದ ಶೋಧ ಕಾರ್ಯಾಚರಣೆಯಲ್ಲಿ ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಮುಳುಗು ತಜ್ಞ ಈಶ್ವರ ಮಲ್ಪೆ ಅವರು ಲಾರಿಗೆ ಹಗ್ಗ ಕಟ್ಟಿ ಮೇಲೆ ಎಳೆಯಲು ವ್ಯವಸ್ಥೆ ಮಾಡಿದ್ದು, ಲಾರಿ ಮೇಲೆತ್ತುವ ಕಾರ್ಯಾಚರಣೆಗೆ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ.

ಇನ್ನು ಕಳೆದ ಆಗಸ್ಟ್​ 13 ರಂದು ಕೇರಳ ಮೂಲದ ಚಾಲಕ ಅರ್ಜುನ್ ಓಡಿಸುತ್ತಿದ್ದ ಲಾರಿಯ ಜಾಕ್ ಗಂಗಾವಳಿ ನದಿಯಲ್ಲಿ ಸ್ಕೂಬಾ ಡೈವ್ ಕಾರ್ಯಾಚರಣೆ ವೇಳೆ ಪತ್ತೆಯಾಗಿತ್ತು. ಸಿಕ್ಕಿರುವ ಜಾಕ್ ಅರ್ಜುನ್ ಓಡಿಸುತ್ತಿದ್ದ ಲಾರಿದೆ ಎಂದು ಲಾರಿ ಮಾಲಿಕ ಮುಫಿನ್ ಖಚಿತ ಪಡಿಸಿದ್ದರು. ಬಳಿಕ ಲಾರಿಯ ಎರಡು ಬಿಡಿ ಭಾಗಗಳಾದ ಲಾರಿ ಬಾಗಿಲಿನ ಕೀಲು ಕೂಡ ಪತ್ತೆಯಾಗಿತ್ತು. ಅದರಂತೆ ಇಂದು ಲಾರಿ ಸಿಕ್ಕಿದ್ದು, ಮೇಲೆತ್ತುವ ಕಾರ್ಯ ನಡೆಯುತ್ತಿದೆ.

No Comments

Leave A Comment