ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದೆಹಲಿ ಶ್ರದ್ಧಾ ವಾಕರ್ ರೀತಿಯಲ್ಲೇ ಬೆಂಗಳೂರಿನಲ್ಲಿ ಭಯಾನಕ ಕೊಲೆ: ಯುವತಿಯ ಹತ್ಯೆಗೈದು 30ಕ್ಕೂ ಹೆಚ್ಚು ತುಂಡು ಮಾಡಿ ಫ್ರಿಡ್ಜ್​ನಲ್ಲಿಟ್ಟ ಆರೋಪಿ

ಬೆಂಗಳೂರು, ಸೆ.21: ದೇಶವನ್ನೇ ಬೆಚ್ಚಿಬೀಳಿಸಿದ್ದ ದೆಹಲಿಯ ಶ್ರದ್ಧಾ ವಾಕರ್ ಕೊಲೆಯ ರೀತಿಯಲ್ಲೇ  ಬೆಂಗಳೂರಿನಲ್ಲಿಯೂ  ಯುವತಿಯೊಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ನಗರದ ವೈಯಾಲಿಕಾವಲ್‌ನ ಪೈಪ್ ಲೈನ್ ರಸ್ತೆಯ ವೀರಣ್ಣ ಭವನ ಬಳಿಯ ಮನೆಯೊಂದರಲ್ಲಿ ಆರೋಪಿಯು ಯುವತಿಯನ್ನು ಕೊಲೆಗೈದು 30 ಕ್ಕೂ ಹೆಚ್ಚು ಪೀಸ್ ಪೀಸ್‌ ಮಾಡಿ ಫ್ರಿಜ್‌ನಲ್ಲಿ ಇಟ್ಟಿದ್ದಾನೆ. ಮೇಲ್ನೋಟಕ್ಕೆ ಹೊರ ರಾಜ್ಯದ ಸುಮಾರು 25 ರಿಂದ 26 ವಯಸ್ಸಿನ ಯುವತಿ ಎಂದು ಗುರುತಿಸಲಾಗಿದ್ದು, ಹತ್ತರಿಂದ ಹದಿನೈದು ದಿನಗಳ ಹಿಂದೆಯೇ ಹತ್ಯೆ ಮಾಡಲಾಗಿದೆ. ಸಧ್ಯ ಸ್ಥಳಕ್ಕೆ ವೈಯಾಲಿಕಾವಲ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

ಕಳೆದ ಎರಡು ದಿನಗಳಿಂದ ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನಲೆ ಅದೇ ಬಿಲ್ಡಿಂಗ್​ನ ಅಕ್ಕಪಕ್ಕದವರು ಇವತ್ತು ಸಂಬಂಧಿಕರಿಗೆ ಹೇಳಿದ್ದಾರೆ. ಅದರಂತೆ ಕೊಲೆಯಾದಂತಹ ಯುವತಿಯ ತಾಯಿ ಮತ್ತು ಅಕ್ಕ ಮನೆ ಬಳಿ ಬಂದು ಬೀಗ ಹೊಡೆದು ಒಳಹೋದಾಗ ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

No Comments

Leave A Comment