ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
1st test Match: 3ನೇ ದಿನದಾಟ ಅಂತ್ಯಕ್ಕೆ ಬಾಂಗ್ಲಾದೇಶ 158/4, Kohli ದಾಖಲೆ ಮುರಿದ ಶುಭ್ ಮನ್ ಗಿಲ್!
ಚೆನ್ನೈ: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನದಾಟ ಮಂದಬೆಳಕಿನ ಕಾರಣ ಅಂತ್ಯವಾಗಿದ್ದು, ಬಾಂಗ್ಲಾದೇಶ 4 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿ ಸೋಲಿನ ಸಂಕಷ್ಟದಲ್ಲಿ ಸಿಲುಕಿದೆ.
ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ನೀಡಿರುವ 515 ರನ್ ಬೃಹತ್ ಗುರಿಯನ್ನು ಬೆನ್ನು ಹತ್ತಿರುವ ಬಾಂಗ್ಲಾದೇಶ ತನ್ನ ಎರಡನೇ ಇನ್ನಿಂಗ್ಸ್ ನಲ್ಲಿ 158 4 ಪ್ರಮುಖ ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.
ಬಾಂಗ್ಲಾಪರ ಆರಂಭಿಕರಾಗಿ ಕಣಕ್ಕಿಳಿದ ಝಾಕಿರ್ ಹಸನ್ (33 ರನ್) ಮತ್ತು ಶಾದ್ಮನ್ ಇಸ್ಲಾಂ (35 ರನ್) ಉತ್ತಮ ಆರಂಭ ನೀಡಿದರು. ಮೊದಲ ವಿಕೆಟ್ ಗೆ ಈ ಜೋಡಿ 62ರನ್ ಕಲೆ ಹಾಕಿತು. ಆದರೆ ಈ ಹಂತದಲ್ಲಿ ದಾಳಿಗಿಳಿದ ಅಶ್ವಿನ್ ಶಾದ್ಮನ್ ಇಸ್ಲಾಂರ ವಿಕೆಟ್ ಪಡೆದರು.
ಬಳಿಕ ಜಸ್ ಪ್ರೀತ್ ಬುಮ್ರಾ ಕೂಡ ಝಾಕಿರ್ ಹಸನ್ ವಿಕೆಟ್ ಪಡೆದು ಬಾಂಗ್ಲಾದೇಶಕ್ಕೆ ಮತ್ತೊಂದು ಆಘಾತ ನೀಡಿದರು. ಬಳಿಕ ಕ್ರೀಸ್ ಗೆ ಬಂದ ನಾಯಕ ಶಾಂತೋ ಅಜೇಯ ಅರ್ಧಶತಕ ಗಳಿಸಿ ಬಾಂಗ್ಲಾ ತಂಡಕ್ಕೆ ಆಸರೆಯಾಗಿ ನಿಂತಿದ್ದಾರೆ.
ಆದರೆ ಮೋಮಿನುಲ್ ಹಕ್ ಮತ್ತು ಮುಷ್ಪಿಕರ್ ರಹೀಂ ತಲಾ 13ರನ್ ಗಳಿಸಿ ಅಶ್ವಿನ್ ಬೌಲಿಂಗ್ ನಲ್ಲಿ ಔಟಾದರು.
51ರನ್ ಗಳಿಸಿರುವ ನಾಯಕ ಶಾಂತೋ, 5 ರನ್ ಗಳಿಸಿರುವ ಶಕೀಬ್ ಅಲ್ ಹಸನ್ 4ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ. ಭಾರತದ ಪರ ಆರ್ ಅಶ್ವಿನ್ 3 ವಿಕೆಟ್ ಮತ್ತು ಬುಮ್ರಾ 1 ವಿಕೆಟ್ ಕಬಳಿಸಿದ್ದಾರೆ.
ಕೊಹ್ಲಿ ದಾಖಲೆ ಮುರಿದ ಗಿಲ್
ಇನ್ನು ಈ ಪಂದ್ಯದಲ್ಲಿ ಶತಕದ ಮೂಲಕ ಭಾರತದ ಬೃಹತ್ ಮೊತ್ತಕ್ಕೆ ನೆರವಾದ ಗಿಲ್ ಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಅವರ ದಾಖಲೆಯೊಂದನ್ನು ಹಿಂದಿಕ್ಕಿದ್ದಾರೆ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಸರಣಿಯಲ್ಲಿ ಒಟ್ಟು 62 ಇನಿಂಗ್ಸ್ ಆಡಿರುವ ಕೊಹ್ಲಿ 4 ಶತಕ ಬಾರಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ನಲ್ಲಿ ಅತೀ ಹೆಚ್ಚು ಶತಕ ಸಿಡಿಸಿದ ಆಟಗಾರ ಎಂಬ ಕೀರ್ತಿ ಹೊಂದಿದ್ದರು.
ಇದೀಗ 5ನೇ ಶತಕದೊಂದಿಗೆ ಶುಭ್ಮನ್ ಗಿಲ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. ಇದೀಗ 5ನೇ ಶತಕದೊಂದಿಗೆ ಶುಭ್ಮನ್ ಗಿಲ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ.
ಆಗ್ರಸ್ಥಾನದಲ್ಲಿ ರೋಹಿತ್ ಶರ್ಮಾ
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ. ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನಲ್ಲಿ 56 ಇನಿಂಗ್ಸ್ ಆಡಿರುವ ಹಿಟ್ಮ್ಯಾನ್ ಒಟ್ಟು 9 ಶತಕಗಳನ್ನು ಸಿಡಿಸಿದ್ದಾರೆ. ಈ ಮೂಲಕ WTC ಇತಿಹಾಸದಲ್ಲಿ ಅತೀ ಹೆಚ್ಚು ಸೆಂಚುರಿ ಬಾರಿಸಿದ ಭಾರತೀಯ ಬ್ಯಾಟರ್ ಎಂಬ ದಾಖಲೆ ನಿರ್ಮಿಸಿದ್ದಾರೆ.