ಉಡುಪಿ ನಗರದ ಕೆ.ಎ೦.ಮಾರ್ಗದಲ್ಲಿನ ಶ್ರೀಭಗವಾನ್ ನಿತ್ಯಾನ೦ದ ಮ೦ದಿರ-ಮಠದಲ್ಲಿ ಜುಲಾಯಿ 10ರ ಗುರುವಾರದ೦ದು ಶ್ರೀಗುರು ಪೂರ್ಣಿಮಾ ಮಹೋತ್ಸವವು ಜರಗಲಿದೆ...
ಬೆಂಗಳೂರು: ಡ್ರಗ್ಸ್ ಕೇಸ್ನಲ್ಲಿ ದಂಪತಿ ಅರೆಸ್ಟ್, 1 ಕೋಟಿ ಅಧಿಕ ಮೌಲ್ಯದ ಮಾದಕ ವಸ್ತು ವಶ
ಬೆಂಗಳೂರು, ಸೆಪ್ಟೆಂಬರ್ 23: ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದ ದಂಪತಿಯನ್ನು ಸಿಸಿಬಿ ಪೊಲೀಸರು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯರಪ್ಪನಹಳ್ಳಿ ಗ್ರಾಮದಲ್ಲಿ ಬಂಧಿಸಿದ್ದಾರೆ. ಆಫ್ರಿಕಾ ಮೂಲದ ಮೈಕಲ್ ಓಕೆಲಿ, ಮತ್ತು ಬೆಂಗಳೂರಿನ ಸಹನಾ ಬಂಧಿತ ಆರೋಪಿಗಳು. ಬಂಧಿತರಿಂದ ಒಂದು ಕೋಟಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಆರೋಪಿ ಮೈಕೆಲ್ 2018ರಲ್ಲಿ ಬ್ಯುಸಿನೆಸ್ ವೀಸಾದಲ್ಲಿ ಭಾರತಕ್ಕೆ ಬಂದು, ಕೆ.ಆರ್.ಪುರಂನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದನು. ಇಲ್ಲಿ, ಪಕ್ಕದ ಮನೆಯಲ್ಲಿ ವಾಸವಿದ್ದ ಸಹನಾ ಎಂಬುವರನ್ನು ಪ್ರೀತಿಸಿ ಮದುವೆ ಆಗಿದ್ದಾನೆ. ನಂತರ ಪತ್ನಿಯನ್ನು ಸೇರಿಸಿಕೊಂಡು ಡ್ರಗ್ಸ್ ಪೆಡ್ಲಿಂಗ್ ಮಾಡುತ್ತಿದ್ದನು. ನಂತರ, ಮೈಕಲ್ ಮತ್ತು ಸಹನಾ ದಂಪತಿ ಕೆಆರ್ಪುರಂನಿಂದ ಯರಪ್ಪನಹಳ್ಳಿ ಗ್ರಾಮಕ್ಕೆ ಶಿಫ್ಟ್ ಆಗಿದ್ದಾರೆ. ಇಲ್ಲಿಂದಲೇ ಡ್ರಗ್ಸ್ ಸರಬರಾಜು ಮಾಡಲು ಆರಂಭಿಸಿದರು.
ಸಿಸಿಬಿ ಪೊಲೀಸರು ಜುಲೈನಲ್ಲಿ ಓರ್ವ ಡ್ರಗ್ಸ್ ಪೆಡ್ಲರ್ನನ್ನು ಬಂಧಿಸಿದ್ದರು. ಈತ ನೀಡಿದ ಮಾಹಿತಿ ಆಧರಿಸಿ ಸಿಸಿಬಿ ಪೊಲೀಸರು ಮೈಕಲ್ನ ಬಂಧನಕ್ಕೆ ಬಲೆಬೀಸಿದ್ದರು. ಆರೋಪಿ ಮೈಕಲ್ ಯರಪ್ಪನಹಳ್ಳಿ ಗ್ರಾಮದಲ್ಲಿರುವ ಬಗ್ಗೆ ಮಾಹಿತಿ ಪಡೆದ ಸಿಸಿಬಿ ಪೊಲೀಸರು ಆತನ ಮನೆ ಮೇಲೆ ದಾಳಿ ಮಾಡಿದ್ದಾರೆ. ಬಳಿಕ ದಂಪತಿಯನ್ನು ಬಂಧಿಸಿದ್ದಾರೆ.
ಬಂಧಿತರಿಂದ ಒಂದು ಕೆಜಿಗೂ ಅಧಿಕ ಎಂಡಿಎಂಎ, ಮೂರು ಮೊಬೈಲ್, ಎರಡು ಎಲೆಕ್ಟ್ರಾನಿಕ್ ತೂಕದ ಯಂತ್ರ ವಶಕ್ಕೆ ಪಡೆದಿದ್ದಾರೆ.