ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ಬೆಂಗಳೂರು ಸೇರಿ ಕರ್ನಾಟಕದ 20 ಜಿಲ್ಲೆಗಳಲ್ಲಿ ಭಾರಿ ಮಳೆ, ಯೆಲ್ಲೋ ಅಲರ್ಟ್​

ಬೆಂಗಳೂರು ಸೇರಿ ಕರ್ನಾಟಕದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಸೆಪ್ಟೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಹೆಚ್ಚು ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ವಿಜಯನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಾಮರಾಜನಗರ, ಬೀದರ್, ಬಾಗಲಕೋಟೆಯಲ್ಲಿ ಸಾಧಾರಣ ಮಳೆಯಾಗಲಿದೆ. ಮಿಡಿಗೇಶಿ, ಭಾಲ್ಕಿ, ಔರಾದ್, ಗಂಗಾವತಿ, ತೊಂಡೇಭಾವಿ, ಗದಗ, ಸೇಡಬಾಳ, ಗೌರಿಬಿದನೂರು, ಹಳಿಯಾಳ, ಮಂಠಾಳ, ಹುಮನಾಬಾದ್, ಅಣ್ಣಿಗೆರೆ, ಬೀದರ್, ಜೇವರ್ಗಿ, ಚಿತ್ರದುರ್ಗ, ಸುಳ್ಯ, ಕಲಬುರಗಿ, ವಿಜಯಪುರ, ಕುರ್ಡಿ, ನೆಲೋಗಿ, ಹಗರಿಬೊಮ್ಮನಹಳ್ಳಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಭಾನುವಾರದಿಂದ ಅಲ್ಲಲ್ಲಿ ಮಳೆಯಾಗುತ್ತಿದೆ, ಎಚ್​ಎಎಲ್​ನಲ್ಲಿ 30.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹೊನ್ನಾವರದಲ್ಲಿ 30.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 33.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 25.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 32.3ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಪಣಂಬೂರಿನಲ್ಲಿ 31.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಬೀದರ್​ನಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ,ವಿಜಯಪುರದಲ್ಲಿ 33.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬಾಗಲಕೋಟೆಯಲ್ಲಿ 31.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಧಾರವಾಡದಲ್ಲಿ 28.0ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಗದಗದಲ್ಲಿ 31.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಹಾವೇರಿಯಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೊಪ್ಪಳದಲ್ಲಿ 31.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 23.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ರಾಯಚೂರಿನಲ್ಲಿ 32.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

No Comments

Leave A Comment