ಮಹಾಲಕ್ಷ್ಮಿಯ ಹಂತಕನ ಗುರುತು ಪತ್ತೆ, ಶೀಘ್ರವೇ ಬಂಧಿಸುತ್ತೇವೆ: ನಗರ ಪೊಲೀಸ್ ಆಯುಕ್ತ ಬಿ ದಯಾನಂದ್
ಬೆಂಗಳೂರು: ರಾಜಧಾನಿ ಬೆಂಗಳೂರನ್ನು ಬೆಚ್ಚಿ ಬೀಳಿಸಿರುವ ಮಹಾಲಕ್ಷ್ಮೀ ಹತ್ಯೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಹಂತಕನು ಹೊರ ರಾಜ್ಯದವನು ಎಂಬ ಮಾಹಿತಿ ಲಭ್ಯವಾಗಿದೆ. ಆತ ಬೆಂಗಳೂರಿನಲ್ಲಿ ವಾಸವಾಗಿದ್ದ ಎಂಬುವುದು ತಿಳಿದುಬಂದಿದ್ದು, ಶಂಕಿತನ ಬಗ್ಗೆ ಈ ಹಂತದಲ್ಲಿ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ವೈಯಾಲಿಕಾವಲ್ ನಿವಾಸಿ ಮಹಾಲಕ್ಷ್ಮೀ ಕೊಲೆ ಪ್ರಕರಣದ ಆರೋಪಿಯ ಗುರುತು ಪತ್ತೆಯಾಗಿದೆ. ಆರೋಪಿಗಾಗಿ ಹುಡುಕಾಟ ಮುಂದುವರೆದಿದ್ದು, ಶೀಘ್ರವೆ ಬಂಧಿಸುತ್ತೇವೆ.ಎಲ್ಲ ಕೋನಗಳಿಂದಲೂ ತನಿಖೆ ನಡೆಸಲಾಗುತ್ತಿದೆ. ಪ್ರಮುಖ ಆರೋಪಿಯನ್ನು ಗುರುತಿಸಿ ಆತನನ್ನು ಬಂಧಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದರು.
ಗಣೇಶಮೂರ್ತಿ ಮೆರವಣಿಗೆ ವೇಳೆ ಬೆಂಗಳೂರಿನಲ್ಲಿ ಗಲಾಟೆ ಆಗಿಲ್ಲ. ಯಾವುದೇ ಅಹಿತಕರ ಘಟನೆ ಆಗಿಲ್ಲ ಎಂದರು. ಸಿಸಿಬಿ ಪೊಲೀಸರು ಓರ್ವ ವಿದೇಶಿ ಪ್ರಜೆ ಮತ್ತು ಮಹಿಳೆಯನ್ನು ಬಂಧಿಸಿದ್ದಾರೆ. ಬಂಧಿತರಿಂದ 1.5 ಕೋಟಿ ಮೌಲ್ಯದ ಒಂದು ಕೆಜಿ ಎಂಡಿಎಂಎ ವಶಕ್ಕೆ ಪಡೆಯಲಾಗಿದೆ.
ಈಗಾಗಲೇ ತನಿಖೆ ಮುಂದುವರೆದಿದೆ. ಜುಲೈ ತಿಂಗಳಲ್ಲಿ ಓರ್ವ ವಿದೇಶಿ ಪ್ರಜೆಯನ್ನು ಬಂಧಿಸಿ, 4 ಎಂಡಿಎಂಎ ವಶಕ್ಕೆ ಪಡೆದಿದ್ದೇವು. ಈಗ ಈತನ ಜೊತೆಗಿದ್ದ ಮಹಿಳೆಯನ್ನು ಬಂಧಸಿಲಾಗಿದೆ. ಆರೋಪಿ ಆಫ್ರಿಕಾ ದೇಶದವನಾಗಿದ್ದು, 2018ರಲ್ಲಿ ಭಾರತಕ್ಕೆ ಬಂಧಿದ್ದನು. ಆತನ ಜೊತೆಗೆ ಸಿಕ್ಕ ಮಹಿಳಾ ಆರೋಪಿ ಆತನ ಜೊತೆ ಕೃತ್ಯದಲ್ಲಿ ಭಾಗಿಯಾಗಿದ್ದವಳು ಎಂದು ತಿಳಿಸಿದರು.