ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ದೆಹಲಿಯ ಎಂಟನೇ ಸಿಎಂ ಆಗಿ ಅಧಿಕಾರವಹಿಸಿಕೊಂಡ ಆತಿಶಿ
ದೆಹಲಿ: ದೆಹಲಿಯ ಎಂಟನೇ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ ನಾಯಕಿ ಆತಿಶಿ ಇಂದು ಅಧಿಕಾರ ವಹಿಸಿಕೊಂಡರು.
ಈ ವೇಳೆ ಮಾತನಾಡಿದ ಅವರು, ಭಗವಾನ್ ರಾಮನ ಪಾದಗಳನ್ನು ಸಿಂಹಾಸನದ ಮೇಲೆರಿಸಿ ಭರತ ಆಡಳಿತ ನಡೆಸಿದ ರೀತಿಯಲ್ಲೇ ಮುಂದಿನ ನಾಲ್ಕು ತಿಂಗಳು ಮುಖ್ಯಮಂತ್ರಿಯಾಗಿ ನಾನು ಕಾರ್ಯ ನಿರ್ವ ಹಿಸುತ್ತೇನೆ. ಫೆಬ್ರುವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಯಲ್ಲಿ ದೆಹಲಿಯ ಜನತೆ ಕೇಜ್ರಿವಾಲ್ ಅವರನ್ನು ಮರಳಿ ಮುಖ್ಯಮಂತ್ರಿ ಸ್ಥಾನಕ್ಕೆ ಕರೆತರುತ್ತಾರೆ ಎಂದು ಭಾವಿಸುತ್ತೇನೆ. ಅಲ್ಲಿಯವರೆಗೆ ಅವರ ಕುರ್ಚಿ ಸಿಎಂ ಕಚೇರಿಯಲ್ಲೇ ಇರುತ್ತದೆ ಎಂದು ಅವರು ಹೇಳಿದ್ದಾರೆ.
ಕೇಜ್ರಿವಾಲ್ ಅವರು ಬಳಸಿರುವ ಕುರ್ಚಿ ಬಳಸದೆ ಆತಿಶಿ ಬೇರೆ ಕುರ್ಚಿಯ ಮೇಲೆ ಕುಳಿತರು. ದೆಹಲಿ ವಿಧಾನಸಭೆಯ ಅಧಿವೇಶನ ಸೆಪ್ಟೆಂಬರ್ 26 ಮತ್ತು 27ರಂದು ನಡೆಯಲಿದೆ.
ದೆಹಲಿ ಮುಖ್ಯಮಂತ್ರಿಯಾಗಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕಿ ಆತಿಶಿ ಶನಿವಾರ ಪ್ರಮಾಣವಚನ ಸ್ವೀಕರಿಸಿದ್ದರು. ಜೊತೆಗೆ ಐವರು ನಾಯಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.