ನಾಡಿನ ಸಮಸ್ತ ಜನತೆಗೆ ,ನಮ್ಮ ಎಲ್ಲಾ ಗ್ರಾಹಕರಿಗೆ,ಜಾಹೀರಾತುದಾರರಿಗೆ "ಕ್ರಿಸ್ಮಸ್" ಹಬ್ಬ ಹಾಗೂ ಹೊಸವರುಷದ ಶುಭಾಶಯಗಳು...

ರೇಣುಕಾ ಸ್ವಾಮಿ ಕೊಲೆ ಕೇಸ್: ನಟ ದರ್ಶನ್ ಜಾಮೀನು ಅರ್ಜಿ ವಿಚಾರಣೆ ಸೆ. 27ಕ್ಕೆ ಮುಂದೂಡಿಕೆ

ಬೆಂಗಳೂರು:ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಯಾಗಿರುವ ನಟ ದರ್ಶನ್ ಅವರ ಜಾಮೀನು ಅರ್ಜಿ ವಿಚಾರಣೆಯು ಸೆಪ್ಟೆಂಬರ್ 27ಕ್ಕೆ ಮುಂದೂಡಿಕೆ ಆಗಿದೆ.

ಇನ್ನು ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡ ಅವರು ಕೂಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅವರ ಜಾಮೀನು ಅರ್ಜಿಯ ವಿಚಾರಣೆ ಸೆಪ್ಟೆಂಬರ್ 25ಕ್ಕೆ ಮುಂದೂಡಲಾಗಿದೆ. ಇನ್ನು ದರ್ಶನ್ ಮತ್ತು ಪವಿತ್ರಾ ಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿರುವ ಹಿನ್ನೆಲೆ ಆಕ್ಷೇಪಣೆ ಸಲ್ಲಿಸಲು ಎಸ್‌ಪಿಪಿ ಪ್ರಸನ್ನ ಕುಮಾರ್ ಅವರು ಕಾಲಾವಕಾಶ ಕೋರಿದ್ದಾರೆ. ಅದಕ್ಕಾಗಿ ನ್ಯಾಯಾಲಯ ಅವಕಾಶ ನೀಡಿದೆ.

ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿ 57ನೇ ಸಿಸಿಹೆಚ್ ನ್ಯಾಯಾಲಯದ ಜಡ್ಜ್ ಜೈಶಂಕರ್ ಆದೇಶ ನೀಡಿದ್ದಾರೆ. ಪ್ರಮುಖ ಆರೋಪಿಗಳಾದ ನಟ ದರ್ಶನ್ ಹಾಗೂ ನಟಿ ಪವಿತ್ರಾ ಗೌಡ ಅವರು ಜಾಮೀನು ಪಡೆಯಲು ಪ್ರಯತ್ನ ಪಡುತ್ತಿದ್ದಾರೆ.

No Comments

Leave A Comment