ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್; ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿಗೆ ತಡೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ!
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಇಂದು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಹೌದು.. ಮುಡಾ ಹಗರಣದಲ್ಲಿ ಪ್ರಾಸಿಕ್ಯೂಷನ್ ಭೀತಿ ಎದುರಿಸುತ್ತಿದ್ದ ಸಿಎಂ ಸಿದ್ದರಾಮಯ್ಯಗೆ ಕರ್ನಾಟಕ ಹೈಕೋರ್ಟ್ ಆಘಾತ ನೀಡಿದ್ದು, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ಸಂಬಂಧ ಕೊನೆಗೂ ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದೆ.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ವಜಾಗೊಳಿಸಿದೆ.
ಹೈಕೋರ್ಟ್ ಹೇಳಿದ್ದೇನು?
ಸಿಎಂ ವಿರುದ್ಧ ಖಾಸಗಿ ದೂರುದಾರರೇ ಅನುಮತಿ ಕೋರಬಹುದು. ಸಂವಿಧಾನದ ವಿಧಿ ‘17 ಎ’ ಅಡಿ ಅನುಮತಿ ಕೋರಿದ್ದು ಸರಿಯಾಗಿದೆ. ಸಚಿವ ಸಂಪುಟದ ಶಿಫಾರಸನ್ನು ರಾಜ್ಯಪಾಲರು ತಿರಸ್ಕರಿಸಿದ್ದು ಸರಿಯಾಗಿದೆ. ರಾಜ್ಯಪಾಲರು ವಿವೇಚನೆ ಬಳಸಿದ್ದಾರೆ. ‘17 ಎ’ ಅಡಿಯ ಆದೇಶ ಸಮರ್ಪಕವಾಗಿದೆ ಎಂದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ ಸಿಎಂ ಸಿದ್ದರಾಮಯ್ಯ ಅರ್ಜಿಯನ್ನು ವಜಾಗೊಳಿಸಿದರು.
ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್, ಸಿಎಂ ಕುಟುಂಬಸ್ಥರು ಫಲಾನುಭವಿಗಳಾಗಿದ್ದಾರೆ. ಹೀಗಾಗಿ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ. ಸಿಎಂ ಎತ್ತಿದ್ದ ಎಲ್ಲಾ ಕಾನೂನಿನ ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ ಎಂದಿದೆ.
ಸಿದ್ದರಾಮಯ್ಯ ಪರ ವಾದ
ಸಿಎಂ ಪರ ವಕೀಲರ ವಾದಕ್ಕೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು. ರಾಜ್ಯಪಾಲರು ಮೇಲ್ನೋಟಕ್ಕೆ ಅಪರಾಧದ ಅಂಶಗಳಿವೆಯೇ ಎಂಬುದನ್ನಷ್ಟೇ ಸೆಕ್ಷನ್ 17 ಎ ಅಡಿಯಲ್ಲಿ ನೋಡಬೇಕು. ರಾಜ್ಯಪಾಲರು ತೀರ್ಪು ನೀಡಿಲ್ಲ ಮತ್ತು ನೀಡುತ್ತಿಲ್ಲ. ತನಿಖೆಗೆ ಅನುಮತಿಯಷ್ಟೇ ನೀಡುತ್ತಿದ್ದಾರೆ. ಹೀಗಾಗಿ ಅವರು ವಿವರವಾದ ಕಾರಣಗಳನ್ನು ಕೊಡಬೇಕಿಲ್ಲ. ಕೊಟ್ಟರೆ ತನಿಖಾಧಿಕಾರಿ ಮೇಲೆ ಪ್ರಭಾವ ಬೀರಿದಂತೆ ಆಗುವ ಸಾಧ್ಯತೆ ಇರುತ್ತದೆ ಎಂದು ತುಷಾರ್ ಮೆಹ್ತಾ ಪ್ರತಿವಾದ ಮಂಡಿಸಿದ್ದರು.