ಉಡುಪಿಯಲ್ಲಿ ಎನ್ ಕೌಂಟರ್: ಮೋಸ್ಟ್ ವಾಂಟೆಡ್ ನಕ್ಸಲ್ ನಾಯಕ ವಿಕ್ರಮ್ ಗೌಡ ಸಾವು....ಮಹಾ ಚುನಾವಣೆ: ಮತದಾರರು ಬೂತ್‌ಗಳಿಗೆ ತೆರಳಲು QR ಕೋಡ್ ಪರಿಚಯ...ನವೆಂಬರ್ 25ರಿಂದ ಸಂಸತ್ ಚಳಿಗಾಲದ ಅಧಿವೇಶನ: ಭಾನುವಾರ ಸರ್ವಪಕ್ಷ ಸಭೆ...
ರಸ್ತೆ ಗುಂಡಿ: ಗಡುವು ಮುಕ್ತಾಯ ಬೆನ್ನಲ್ಲೇ ನಗರದಲ್ಲಿ DCM ನೈಟ್ ರೌಂಡ್ಸ್, ಸ್ಥಿತಿಗತಿ ಪರಿಶೀಲನೆ
ಬೆಂಗಳೂರು: ಬೆಂಗಳೂರಲ್ಲಿ ರಸ್ತೆ ಗುಂಡಿ ಮುಚ್ಚಲು ನೀಡಿದ್ದ ಗಡುವು ಮುಕ್ತಾಯಗೊಂಡ ಬೆನ್ನಲ್ಲೇ ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್ ಸೋಮವಾರ ತಡರಾತ್ರಿವರೆಗೂ ನಗರ ಪ್ರದಕ್ಷಿಣೆ ಮಾಡಿದರು.
ತಡರಾತ್ರಿ ನಗರದ ಹಲವು ರಸ್ತೆಗಳಿಗೆ ಖುದ್ದು ಭೇಟಿ ನೀಡಿದ ಡಿಸಿಎಂ, ಕಾಮಗಾರಿಗಳ ಸ್ಥಿತಿಗತಿಗಳನ್ನ ಪರಿಶೀಲನೆ ನಡೆಸಿದರು. ಈ ವೇಳೆ ಉಪ ಮುಖ್ಯಮಂತ್ರಿಗಳಿಗೆ ಬಿಬಿಎಂಪಿ ಅಧಿಕಾರಿಗಳು ಸಾಥ್ ನೀಡಿದ್ದರು.
ಡಿಕೆ.ಶಿವಕುಮಾರ್ ನಗರದ ಪ್ರಮುಖ ರಸ್ತೆಗಳಾಗ ಜೆಸಿ ರಸ್ತೆ, ಟ್ರಿನಿಟಿ ಜಂಕ್ಷನ್ ಹಾಗೂ ದೊಮ್ಮಲೂರು ಬ್ರಿಡ್ಜ್ ಬಳಿ ರಸ್ತೆ ಗುಂಡಿಗಳ ದುರಸ್ತಿ ಕಾಮಗಾರಿಯ ಸ್ಥಿತಿಗತಿಗಳನ್ನು ಪರಿಶೀಲಿಸಿದರು.
ಕೆಲವು ರಸ್ತೆಗಳಲ್ಲಿ ತಾವೇ ಗಡಾರಿ ಮೂಲಕ ಗುಂಡಿಗೆ ಮುಚ್ಚಿದ್ದ ಡಾಂಬರನ್ನು ಪರಿಶೀಲಿಸಿದರು. ಈ ಮೂಲಕ ಖುದ್ದು ರಸ್ತೆಯ ಗುಂಡಿ ಮುಚ್ಚಿರುವ ಗುಣಮಟ್ಟವನ್ನು ಪರಿಶೀಲಿಸಿ ಖಾತ್ರಿಪಡಿಸಿಕೊಂಡರು.
ಈ ಸಂದರ್ಭಧಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ ಅವರು, ಅಧಿಕಾರಿಗಳು ನೀಡಿದ ಮಾಹಿತಿ ಕೇಳಿ ಕೂರುವವನು ನಾನಲ್ಲ. ಕಾಮಗಾರಿಯ ಗುಣಮಟ್ಟವನ್ನು ಕಣ್ಣಾರೆ ನೋಡಿ ಪರಿಶೀಲಿಸುವುದು ಈ ಭೇಟಿಯ ಉದ್ದೇಶ. ಜಾಗತಿಕ ನಗರವಾಗಿ ಗುರುತಿಸಿಕೊಂಡಿರುವ ಬೆಂಗಳೂರಿನ ಘನತೆಗೆ ಚ್ಯುತಿ ಬರದಂತೆ ಕಾಪಾಡುವುದೇ ನಮ್ಮ ಧ್ಯೇಯ ಎಂದು ಹೇಳಿದರು.
ಇತ್ತೀಚೆಗೆ ಬಿಬಿಎಂಪಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರಿನ ರಸ್ತೆ ಗುಂಡಿಗಳಿಗೆ ಮುಕ್ತಿ ನೀಡಬೇಕು ಎಂದು ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದರು.
15 ದಿನಗಳಲ್ಲಿ ಬೆಂಗಳೂರಿನ ರಸ್ತೆಗಳಲ್ಲಿ ಯಾವುದೇ ಗುಂಡಿಗಳು ಕಣ್ಣಿಗೆ ಕಾಣಿಸಬಾರದು. ಎರಡು ವಾರಗಳ ನಂತರ ನಾನೇ ಖುದ್ದಾಗಿ ಇಡೀ ಬೆಂಗಳೂರು ನಗರವನ್ನು ಸುತ್ತಾಡಲಿ ಪ್ರತಿ ರಸ್ತೆಯನ್ನು ಪರಿಶೀಲಿಸುತ್ತೇನೆ ಎಂದಿದ್ದರು. ಬಳಿಕ ಡಿಕೆಶಿ ಅಮೇರಿಕಾಗೆ ಪ್ರವಾಸ ತೆರಳಿದ್ದರು.