ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ದಾವಣಗೆರೆ ಜಿಲ್ಲೆ ಹರಿಹರದ ಯುವತಿ ಉಡುಪಿಯಲ್ಲಿ ನಾಪತ್ತೆ
ಉಡುಪಿ, ಸೆ.23: ಮೂಲತಃ ದಾವಣಗೆರೆ ಜಿಲ್ಲೆ ಹರಿಹರ ನಿವಾಸಿಯಾದ ಪ್ರಸ್ತುತ ಉಡುಪಿ ತಾಲೂಕು ಪುತ್ತೂರು ಗ್ರಾಮದ ಕೊಡಂಕೂರು ಒಂದನೇ ಕ್ರಾಸ್‌ನ ನ್ಯೂ ಕಾಲೋನಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಅಂಜುಬಾನು (28) ಎಂಬ ಯುವತಿ ಆ. 23ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 3 ಇಂಚು ಎತ್ತರ, ಉದ್ದಮುಖ, ಸಾಧಾರಣ ಮೈಕಟ್ಟು, ಬಿಳಿ ಮೈಬಣ್ಣ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಉರ್ದು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರನಗರ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿ ಸಬಹುದು ಎಂದು ಪ್ರಕಟಣೆ ತಿಳಿಸಿದೆ.