ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ; ಶಾಸಕ ಮುನಿರತ್ನನನ್ನು SIT ಕಸ್ಟಡಿಗೆ ನೀಡಿದ ಕೋರ್ಟ್
ಬೆಂಗಳೂರು, ಸೆ.24: ಅತ್ಯಾಚಾರ ಆರೋಪ ಪ್ರಕರಣ ಎದುರಿಸುತ್ತಿರುವ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ರನ್ನ ಇಂದು ಎಸ್ಐಟಿ ಕಸ್ಟಡಿಗೆ ಪಡೆದಿದೆ. ಹೌದು, ಅಕ್ಟೋಬರ್ 5ರವರೆಗೆ ಎಸ್ಐಟಿ ಕಸ್ಟಡಿಗೆ ನೀಡಿ 42ನೇ ಎಸಿಎಂಎಂ ಕೋರ್ಟ್ನ ನ್ಯಾಯಾಧೀಶ ಕೆ.ಎನ್.ಶಿವಕುಮಾರ್ ಆದೇಶಿಸಿದ್ದಾರೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣೆಯಲ್ಲಿ ಶಾಸಕ ಮುನಿರತ್ನ ವಿರುದ್ದ ದಾಖಲಾಗಿದ್ದ ಅತ್ಯಾಚಾರ ಪ್ರಕರಣ ಸಂಬಂಧಿಸಿದಂತೆ ಮುನಿರತ್ನ ಅವರನ್ನು ಕಳೆದ ಶುಕ್ರವಾರ ಬೆಳಿಗ್ಗೆ ಬಂಧಿಸಲಾಗಿದ್ದು, ಅವರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು. ಇದರ ಬೆನ್ನಲ್ಲೆ ಹೆಚ್ಚಿನ ತನಿಖೆಗಾಗಿ ಇಂದು ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.
ಮುನಿರತ್ನ ವಿರುದ್ದ ಆರೋಪಗಳ ಸುರಿಮಳೆಗೈದಿದ್ದ ಸಂತ್ರಸ್ತೆ….
ಗುತ್ತಿಗೆದಾರನಿಗೆ ಜೀವ ಬೆದರಿಕೆ ಹಾಕಿದ, ಜಾತಿ ನಿಂದನೆ ಹಾಗೂ ಅತ್ಯಾಚಾರ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ ಅಕ್ರಮಗಳಿಗೆ ಸಂಬಂಧಿಸಿದ ಒಂದೊಂದೇ ವಿಚಾರಗಳು ಬೆಳಕಿಗೆ ಬರುತ್ತಿದೆ. ಅದರಂತೆ ಮುನಿರತ್ನ ಬಳಿ ಹಲವಾರು ಖಾಸಗಿ ಅಶ್ಲೀಲ ವಿಡಿಯೋಗಳಿವೆ. ರಾಜಕೀಯ ಎದುರಾಳಿಗಳನ್ನು ಹಣಿಯಲು ಮುನಿರತ್ನ ಹನಿಟ್ರ್ಯಾಪ್ ಷಡ್ಯಂತ್ರ ಹೂಡುತ್ತಿದ್ದರು ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಈ ಬಗ್ಗೆ ಸಂತ್ರಸ್ತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.