ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬ್ರಹ್ಮಾವರ: ಕರ್ನಾಟಕ ರಕ್ಷಣಾ ವೇದಿಕೆಯ ತಾಲೂಕು ಘಟಕದ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಆಯ್ಕೆ
ಬ್ರಹ್ಮಾವರ: ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾ ಕಛೇರಿಯಲ್ಲಿ ನಡೆದ ಸಭೆಯಲ್ಲಿ ಬ್ರಹ್ಮಾವರ ತಾಲೂಕು ಘಟಕ ಅಧ್ಯಕ್ಷರಾಗಿ ಸ್ಟ್ಯಾನಿ ಡಿಸೋಜ ಯವರನ್ನು ಕರ್ನಾಟಕ ರಕ್ಷಣಾ ವೇದಿಕೆ ಬ್ರಹ್ಮಾವರ ತಾಲೂಕು ಘಟಕದ ನೂತನ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಆಯ್ಕೆಯಾದ ಸ್ಟ್ಯಾನಿ ಡಿಸೋಜರವರನ್ನು ಕರ್ನಾಟಕ ರಕ್ಷಣಾ ವೇದಿಕೆಯಾ ಜಿಲ್ಲಾಧ್ಯಕ್ಷರಾದ ಸುಜಯ್ ಪೂಜಾರಿರವರು ಸಂಘಟನೆಯ ಶಾಲು ಹೊದಿಸಿ ಹೂ ಗುಚ್ಛ ನೀಡಿ ಅಭಿನಂದಿಸಿದರು. ಜಿಲ್ಲಾ ಪದಾಧಿಕಾರಿಗಳದ ಗೌರರಾಧ್ಯಕ್ಷರಾದ ಸುಂದರ. ಎ ಬಂಗೇರ. ಮಹಿಳಾ ಜಿಲ್ಲಾಧ್ಯಕ್ಷರು ಗೀತ ಪಾಂಗಳ. ಜಿಲ್ಲಾ ಸಲಹೆಗಾರರು ಪ್ರಕಾಶ್ ದೇವಾಡಿಗ. ಜಿಲ್ಲಾ ಸಂಸ್ಕೃತ ಕಾರ್ಯದರ್ಶಿ ಕಾರ್ಯದರ್ಶಿಯ ಕೃಷ್ಣ ಕುಮಾರ್. ಜಿಲ್ಲಾ ಸಂಘಟನಾ ಕಾರ್ಯದರ್ಶಿ ಗೋಪಾಲ್ ದೊರೆ. ಜಿಲ್ಲಾ ಮಹಿಳಾ ಉಪಾಧ್ಯಕ್ಷರು ದೇವಕಿ ಬಾರ್ಕೂರು. ಜಿಲ್ಲಾ ಮಹಿಳಾ ಪ್ರಧಾನ ಕಾರ್ಯದರ್ಶಿ ಜ್ಯೋತಿ. ಉಪಸ್ಥಿತರಿದ್ದರು.