IPL Mega Auction 2025: ದಾಖಲೆಯ 27 ಕೋಟಿಗೆ ಪಂತ್, ಶ್ರೇಯಸ್ ಅಯ್ಯರ್ ಗೆ 26.75 ಕೋಟಿ. ಐಪಿಎಲ್ ಇತಿಹಾಸದಲ್ಲೇ ದಾಖಲೆ ಮೊತ್ತ....ರೇಣುಕಾಸ್ವಾಮಿ ಹತ್ಯೆ ಪ್ರಕರಣ: 1200 ಪುಟಗಳ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆ, ದರ್ಶನ್ಗೆ ಹೆಚ್ಚಿದ ಸಂಕಷ್ಟ...
ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ
ಬೆಂಗಳೂರು, ಸೆಪ್ಟೆಂಬರ್ 26: ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.
ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕ್ಕೆ ಕಾರಣವಾಗಿತ್ತು. ಹಾಗಾಗಿ ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ.