ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಕಸ್ತೂರಿ ರಂಗನ್ ವರದಿ ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು, ಸೆಪ್ಟೆಂಬರ್​ 26: ಸಾಕಷ್ಟು ವಿರೋಧ ವ್ಯಕ್ತವಾಗಿದ್ದ ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ವಿಧಾನಸೌಧದಲ್ಲಿ ನಡೆದ ಸಂಪುಟ ಸಭೆ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ ಎಂದು ಸಭೆ ಬಳಿಕ ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ.

ಮಾನವನ ಹಸ್ತಕ್ಷೇಪ ಮಾಡುತ್ತಿರುವುದರಿಂದಾಗಿ ಪರಿಸರಕ್ಕೆ ಧಕ್ಕೆ ಉಂಟಾಗುತ್ತಿದೆ. ಆ ಮೂಲಕ ಜೀವ ಸಂಕುಲಕ್ಕೂ ಅಪಾಯ ಎದುರಾಗಲಿದೆ ಎನ್ನುವುದು ಪರಿಸರ ತಜ್ಞರ ಆತಂಕ್ಕೆ ಕಾರಣವಾಗಿತ್ತು. ಹಾಗಾಗಿ ಇದಕ್ಕಾಗಿ ಕಸ್ತೂರಿ ರಂಗನ್ ವರದಿಯನ್ನು ಸಿದ್ಧಪಡಿಸಲಾಗಿತ್ತು. ಆದರೆ ಭಾರಿ ವಿರೋಧ ಮಧ್ಯೆ ಇಂದಿನ ಸಂಪುಟ ಸಭೆಯಲ್ಲಿ ವರದಿಯನ್ನು ತಿರಸ್ಕಾರ ಮಾಡಲಾಗಿದೆ.

No Comments

Leave A Comment