ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು
ಬೆಂಗಳೂರು : ಲಂಚ ಸ್ವೀಕಾರ : ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ
ಬೆಂಗಳೂರು: ಲಂಚ ಸ್ವೀಕರಿಸುತ್ತಿರುವಾಗ ಬಿಬಿಎಂಪಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಬಿಬಿಎಂಪಿ ಯಶವಂತಪುರ ಕಚೇರಿ ಎಆರ್ಒ ರಾಜೇಂದ್ರಪ್ರಸಾದ್ ಹಾಗೂ ತೆರಿಗೆ ಮೌಲ್ಯಮಾಪಕ ಪ್ರಕಾಶ್ ಎಂಬುವವರು ವಾಣಿಜ್ಯ ಕಟ್ಟಡದ ತೆರಿಗೆ ಮೊತ್ತ ಕಡಿಮೆ ಮಾಡಲು ಬರೋಬ್ಬರಿ 4.50 ಲಕ್ಷ ರೂ. ಲಂಚ ಸ್ವೀಕರಿಸುವಾಗ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.
ಇದೀಗ ಇಬ್ಬರು ಅಧಿಕಾರಿಗಳನ್ನು ವಶಕ್ಕೆ ಪಡೆಯಲಾಗಿದ್ದು ಲಂಚದ ಹಣವನ್ನು ಜಪ್ತಿ ಮಾಡಲಾಗಿದೆ.
ಈ ಕುರಿತು ಬೆಂಗಳೂರು ಲೋಕಾಯುಕ್ತ ಠಾಣೆಯಲ್ಲಿ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.