ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...
ಮುಡಾ ಅಧ್ಯಕ್ಷರಿಗೆ ಕಾಂಗ್ರೆಸ್ ಕಾರ್ಯಕರ್ತರಿಂದ ಘೇರಾವ್
ಮೈಸೂರು:ಸೆ.27,ವಿಮಾನ ನಿಲ್ದಾಣದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಸ್ವಾಗತಕ್ಕೆ ಬಂದಿದ್ದ ಮುಡಾ ಅಧ್ಯಕ್ಷ ಕೆ.ಮರಿಗೌಡಗೆ ಕಾಂಗ್ರೆಸ್ ಕಾರ್ಯಕರ್ತರು ಘೇರಾವ್ ಹಾಕಿದ್ದಾರೆ.
ಈ ವೇಳೆ ಕಾರ್ಯಕರ್ತರು ಸಿಎಂ ಸಿದ್ದರಾಮಯ್ಯ ಆಪ್ತ ಮರಿಗೌಡ ಅವರ ವಿರುದ್ಧ ಘೋಷಣೆ ಕೂಗಿದ್ದಾರೆ. ನಿಮ್ಮಿಂದ ನಮ್ಮ ಸಿದ್ದರಾಮಯ್ಯ ಅವರಿಗೆ ಈ ಸ್ಥಿತಿ ಬಂದಿದೆ ಎಂದು ಕಾರು ಹತ್ತಿಸಿ ಅಲ್ಲಿಂದ ವಾಪಸ್ ಕಳುಹಿಸಿದ್ದಾರೆ.
ಈ ವೇಳೆ ಮರೀಗೌಡ ಅವರು ಸಮಜಾಯಿಸಿ ನೀಡಲು ಮುಂದಾಗಿದ್ದಾರೆ. ಆದರೆ ಕಾರ್ಯಕರ್ತರು ಕೇಳದೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಅಲ್ಲದೇ ನಿನ್ನ ಭಾಷಣ ಬೇಡ ಹೊರಡು ಎಂದು ಬಲವಂತವಾಗಿ ಕಾರು ಹತ್ತಿಸಿ ಕಳಿಸಿದ್ದಾರೆ.
ಇಂದು ಸಿದ್ದರಾಮಯ್ಯ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಮೈಸೂರು ನಗರಕ್ಕೆ ತೆರಳಿದ್ದಾರೆ. ಬಳಿಕ ಮೈಸೂರಿನಲ್ಲಿ ನಡೆಯಲಿರುವ ಪ್ರವಾಸೋದ್ಯಮ ದಿನಾಚರಣೆ ಕಾರ್ಯಕ್ರಮ, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ಇನ್ನೂ ಮುಂತಾದ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.