ನಾಡಿನೆಲ್ಲೆಡೆಯಲ್ಲಿ ದೇವಸ್ಥಾನ ಹಾಗೂ ದೇವಿ ದೇವಾಲಯಗಳಲ್ಲಿ ನವರಾತ್ರೆಯ ಸ೦ಭ್ರಮ....ಸಮಸ್ತ ಓದುಗರಿಗೆ,ನಮ್ಮ ಜಾಹೀರಾತುದಾರರಿಗೆ,ಅಭಿಮಾನಿಗಳಿಗೆ ನವರಾತ್ರೆಯ ಶುಭಾಶಯಗಳು

ಡಿನೋಟಿಫಿಕೆಷನ್ ಪ್ರಕರಣ: ಬಿಎಸ್​ವೈ ಬೆನ್ನಲ್ಲೇ ಕುಮಾರಸ್ವಾಮಿಗೂ ಲೋಕಾಯುಕ್ತ ಬುಲಾವ್

ಬೆಂಗಳೂರು, ಸೆಪ್ಟೆಂಬರ್​ 27: ಕೇಂದ್ರ ಸಚಿವ ಹೆಚ್​ಡಿ ಕುಮಾರಸ್ವಾಮಿ  ವಿರುದ್ಧ ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್​ ಜಾರಿ ಹಿನ್ನೆಲೆ ಇಂದು ಸಂಜೆ ಹೆಚ್​ಡಿ ಕುಮಾರಸ್ವಾಮಿ ವಿಚಾರಣೆಗೆ ಹಾಜರಾಗಲಿದ್ದಾರೆ. ಸಂಜೆಯೊಳಗೆ ಹಾಜರಾಗುವುದಾಗಿ ತಿಳಿಸಿದ್ದು, ಏರ್‌ಪೋರ್ಟ್‌ನಿಂದ ನೇರವಾಗಿ ಲೋಕಾ ಕಚೇರಿಗೆ ಆಗಮಿಸಲಿದ್ದಾರೆ.

ಸೋಮವಾರ ವಿಚಾರಣೆಗೆ ಹಾಜರಾಗುವಂತೆ ಹೆಚ್​ಡಿ ಕುಮಾರಸ್ವಾಮಿಗೆ ಲೋಕಾಯುಕ್ತ ಪೊಲೀಸರಿಂದ ನೋಟಿಸ್ ನೀಡಲಾಗಿತ್ತು. ಆದರೆ ಸೋಮವಾರ ಬೇರೆ ಕೆಲಸವಿರುವುದರಿಂದ ಇಂದೇ ವಿಚಾರಣೆಗೆ ಬರುವುದಾಗಿ ತಿಳಿಸಿದ್ದರು. ಹಾಗಾಗಿ ಬೆಂಗಳೂರು ಏರ್ಪೋರ್ಟ್​ನಿಂದ ಹೊರಟು ಯಲಹಂಕ ಬಳಿ ಬರುತ್ತಿರುವ ಕುಮಾರಸ್ವಾಮಿ ಡಿವೈಎಸ್​ಪಿ ಬಸವರಾಜ್ ಮುಗುದಂ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ ಸತತ 3 ಘಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.

ಈ ಬಗ್ಗೆ ದೆಹಲಿ ಮಾತನಾಡಿದ್ದ ಹೆಚ್​ಡಿ ಕುಮಾರಸ್ವಾಮಿ, ಲೋಕಾಯುಕ್ತದ ಯಾವ ಪೊಲೀಸ್ ಅಧಿಕಾರಿಯೂ ನನ್ನನ್ನು ಭೇಟಿ ಮಾಡಿಲ್ಲ. ಅವರು ನನಗೆ ನೋಟಿಸ್ ನೀಡಿದ್ದಾರೆ ಎಂಬುವುದನ್ನು ಕೂಡ ಮಾಧ್ಯಮಗಳ ಮೂಲಕ ತಿಳಿದುಕೊಂಡಿದ್ದೇನೆ. ಆದರೆ ನನಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಹೇಳಿದ್ದರು.

ಗಂಗೇನಹಳ್ಳಿ ಡಿನೋಟಿಫಿಕೆಷನ್ ಪ್ರಕರಣದಲ್ಲಿ ನಾನೇನೂ ತಪ್ಪು ಮಾಡಿಲ್ಲ. ಕಾನೂನಿನ ಪ್ರಕಾರವೇ ಕ್ರಮಕೈಗೊಳ್ಳಾಗಿದೆ. ಸಿಎಂ ಸಿದ್ದರಾಮಯ್ಯ ಕೂಡ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ವಿವಿಧ ಏಜೆನ್ಸಿಗಳು ಸ್ವಾಧೀನಪಡಿಸಿಕೊಂಡಿರುವ ಹಲವಾರು ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆ ಎಂದು ವಾಗ್ದಾಳಿ ಮಾಡಿದ್ದಾರೆ.

ಮುಡಾ ಹಗರಣದಿಂದ ಗಮನ ಬೇರೆಡೆ ಸೆಳೆಯಲು ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದ ಹಳೆ ಪ್ರಕರಣಗಳನ್ನು ಕೆದಕುತ್ತಿದ್ದಾರೆ ಮತ್ತು ನಮನ್ನು ಟಾರ್ಗೆಟ್​ ಮಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವರಾದ ಕೃಷ್ಣ ಭೈರೇಗೌಡ, ದಿನೇಶ್ ಗುಂಡೂರಾವ್​ ಇತ್ತೀಚೆಗೆ ಬಿಎಸ್​ ಯಡಿಯೂರಪ್ಪ ಮತ್ತು ಹೆಚ್​ಡಿ ಕುಮಾರಸ್ವಾಮಿ ವಿರುದ್ಧದ ಕೆಲ ದಾಖಲೆಗಳನ್ನು ಬಿಡುಗಡೆ ಮಾಡಿದ್ದರು.

No Comments

Leave A Comment