ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ
ಕೃಷ್ಣಗಿರಿ: ತಮಿಳುನಾಡಿನ ಟಾಟಾ ಎಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ ಘಟಕದಲ್ಲಿ ಭೀಕರ ಬೆಂಕಿ ಅವಘಡ ಸಂಭವಿಸಿದ್ದು,7 ಅಗ್ನಿಶಾಮಕ ವಾಹನಗಳ ಮೂಲಕ ಬೆಂಕಿ ನಂದಿಸುವ ಕಾರ್ಯ ಮಾಡಲಾಗುತ್ತಿದೆ.
ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಹೊಸೂರು ಬಳಿಯ ಟಾಟಾ ಇಲೆಕ್ಟ್ರಾನಿಕ್ಸ್ ಪ್ರೈವೇಟ್ ಲಿಮಿಟೆಡ್ (TEPL) ಸೌಲಭ್ಯದಲ್ಲಿ ಶನಿವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ನಾಗಮಂಗಲಂ ಸಮೀಪದ ಉದ್ದಾನಪಲ್ಲಿಯಲ್ಲಿರುವ ಕಂಪನಿಯ ಮೊಬೈಲ್ ಫೋನ್ ಬಿಡಿಭಾಗಗಳ ಪೇಂಟಿಂಗ್ ಘಟಕದಲ್ಲಿ ಬೆಳಿಗ್ಗೆ 5:30 ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ಮೂಲಗಳು ತಿಳಿಸಿವೆ.
ಅಗ್ನಿ ಅವಘಡ ಬೆನ್ನಲ್ಲೇ ಇಡೀ ಘಟಕದ ತುಂಬ ದಟ್ಟ ಹೊಗೆ ಆವರಿಸಿದ್ದು, ಕಾರ್ಮಿಕರು ಹಾಗೂ ಸ್ಥಳೀಯರಲ್ಲಿ ಭೀತಿ ಆವರಿಸಿದೆ. ಎಲ್ಲಾ ಉದ್ಯೋಗಿಗಳನ್ನು ಆವರಣದಿಂದ ಸ್ಥಳಾಂತರಿಸಲಾಗಿದ್ದು, ವಿಚಾರ ತಿಳಿದ ಕೂಡಲೇ ಏಳು ಅಗ್ನಿಶಾಮಕ ವಾಹನಗಳು ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ.
ದುರ್ಘಟನೆಯಲ್ಲಿ ಈ ವರೆಗೂ ಯಾವುದೇ ಸಾವು ನೋವು ಸಂಭವಿಸಿದ ವರದಿಯಾಗಿಲ್ಲ.ಮೂಲಗಳ ಪ್ರಕಾರ ಘಟನೆಯ ಸಮಯದಲ್ಲಿ, ಮೊದಲ ಪಾಳಿಯಲ್ಲಿ ಸುಮಾರು 1,500 ಕಾರ್ಮಿಕರು ಕರ್ತವ್ಯದಲ್ಲಿದ್ದರು ಎಂದು ಹೇಳಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ.