ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ
ಬೆಂಗಳೂರು: ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್
ಬೆಂಗಳೂರು: ನಗರದ ಹಲವು ಖಾಸಗಿ ಶಾಲೆಗಳಿಗೆ ಈ ಹಿಂದೆ ಬಾಂಬ್ ಬೆದರಿಕೆ ಕರೆಗಳು ಬಂದಿದ್ದವು. ಇದೀಗ ನಗರದ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೊಟೇಲ್ ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ. ಹೊಟೇಲ್ ನಲ್ಲಿ ಬಾಂಬ್ ಇಟ್ಟು ಸ್ಪೋಟಿಸುವುದಾಗಿ ಕಿಡಿಗೇಡಿಗಳು ಇ-ಮೇಲ್ ಮಾಡಿದ್ದಾರೆ.
ಇದು ಗಮನಕ್ಕೆ ಬಂದ ಕೂಡಲೇ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ನಂತರ ಅದೊಂದು ಹುಸಿ ಬಾಂಬ್ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನಗರದ ಖ್ಯಾತ ಪಂಚತಾರಾ ಹೊಟೇಲ್ ಗಳಲ್ಲಿ ತಾಜ್ ವೆಸ್ಟ್ ಎಂಡ್ ಪ್ರಮುಖವಾಗಿದ್ದು, ಇಲ್ಲಿ ರಾಜಕಾರಣಿಗಳು, ಕ್ರಿಕೆಟರ್ಗಳು, ಉದ್ಯಮಿಗಳು ಆಗಾಗ ವಾಸ್ತವ್ಯ ಹೂಡುತ್ತಾರೆ. ಘಟನೆ ಬಗ್ಗೆ ಮತ್ತಷ್ಟು ತನಿಖೆ ನಡೆಸಲಾಗುತ್ತಿದೆ ಎಂದು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಹೆಚ್ ಟಿ ತಿಳಿಸಿದ್ದಾರೆ.