ಜನವರಿ 18ರಿ೦ದ ಶೀರೂರು ಮಠಾಧೀಶರಾದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯ ಆರ೦ಭ-ಅದ್ದೂರಿಯ ಧಾನ್ಯ, ಶಿಖರ ಮುಹೂರ್ತ ಸ೦ಪನ್ನ…..ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ
ಉಡುಪಿ: ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್ ನಿಧನ
ಉಡುಪಿ: ಸೆ.28: ಉಡುಪಿಯ ಹಿರಿಯ ಛಾಯಾಗ್ರಾಹಕ ಗುರುದತ್ ಕಾಮತ್(58) ಅಲ್ಪಕಾಲದ ಅಸೌಖ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಇಂದು ಶನಿವಾರದ೦ದು ನಿಧನರಾದರು.
ಕಳೆದ ಒಂದು ವಾರದಿಂದ ಕಿಡ್ನಿ ವೈಫಲ್ಯದಿಂದ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಇವರು ಅಂಗಾಂಗ ವೈಫಲ್ಯದಿಂದ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು. ಖ್ಯಾತ ಛಾಯಾಚಿತ್ರಗ್ರಾಹಕರಾಗಿದ್ದ ಇವರು, ಹೊಸತನದಿಂದ ಕೂಡಿದ ಛಾಯಾಗ್ರಾಹಣಕ್ಕೆ ಬಹಳಷ್ಟು ಹೆಸರು ವಾಸಿಯಾಗಿದ್ದರು.
ಇವರ ನಿಧನಕ್ಕೆ ನಮ್ಮ ಕರಾವಳಿಕಿರಣ ಡಾಟ್ ಕಾ೦ ತೀವ್ರ ಸ೦ತಾಪವನ್ನು ಸೂಚಿಸಿ ,ಇವರ ಆತ್ಮಕ್ಕೆ ಸದ್ಗತಿ ದೊರಕಲಿ ಎ೦ದು ಶ್ರೀದೇವರಲ್ಲಿ ಪ್ರಾರ್ಥಿಸುತ್ತೇವೆ.