ದ.ಕ. ಜಿಲ್ಲೆಯ ಮೂವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಷ್ಟ್ರೀಯ ಪ್ರಶಸ್ತಿ...ಪ್ರಧಾನ ಮಂತ್ರಿ ಯೋಜನೆಗಳಿಗೆ ಮರುನಾಮಕರಣ ಮಾಡದಂತೆ ರಾಜ್ಯಗಳಿಗೆ ಕೇಂದ್ರ ಸರಕಾರದ ಆಗ್ರಹ...VHP ಕಾರ್ಯಕ್ರಮದಲ್ಲಿ ವಿವಾದಾತ್ಮಕ ಹೇಳಿಕೆ: ಸುಪ್ರೀಂಕೋರ್ಟ್ ಕೊಲಿಜಿಯಂ ಮುಂದೆ ನ್ಯಾ. ಶೇಖರ್ ಯಾದವ್ ಹಾಜರಾಗುವ ಸಾಧ್ಯತೆ

ಸಾರ್ವಜನಿಕ ಸ್ಥಳಗಳಲ್ಲಿರುವ ದೇವಸ್ಥಾನ, ಮಸೀದಿ, ಚರ್ಚ್ ಗಳನ್ನು ನೆಲಸಮ ಮಾಡಬೇಕು: ಸುಪ್ರೀಂ ಕೋರ್ಟ್

ನವದೆಹಲಿ: ಆಸ್ತಿ ಧ್ವಂಸ ವಿಚಾರದಲ್ಲಿ ಯಾವುದೇ ನಿರ್ದಿಷ್ಟ ಸಮುದಾಯಕ್ಕೆ ಮೀಸಲಾಗಿರದೆ ಎಲ್ಲಾ ಧರ್ಮದ ನಾಗರಿಕರಿಗೆ ಅನ್ವಯವಾಗುವ ಮಾರ್ಗಸೂಚಿಗಳನ್ನು ರೂಪಿಸುವುದಾಗಿ ಸುಪ್ರೀಂ ಕೋರ್ಟ್ ಮಂಗಳವಾರ ಹೇಳಿದೆ.

ಕೋರ್ಟ್ ನಿರ್ದೇಶನಗಳು ಭಾರತದಾದ್ಯಂತ ಅನ್ವಯಿಸುತ್ತವೆ ಹೊರತು ಒಬ್ಬ ವ್ಯಕ್ತಿ ಆರೋಪಿ ಅಥವಾ ಅಪರಾಧಿ ಎಂಬ ಕಾರಣಕ್ಕೆ ಅದು ಆಸ್ತಿ ಧ್ವಂಸಕ್ಕೆ ಆಧಾರವಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದೆ.

ನಮ್ಮದು ಜಾತ್ಯತೀತ ರಾಷ್ಟ್ರ. ಇಲ್ಲಿ ನ್ಯಾಯಾಲಯ ಹೊರಡಿಸುವ ಆದೇಶ ಎಲ್ಲಾ ನಾಗರಿಕರಿಗೂ, ಸಂಸ್ಥೆಗಳಿಗೂ ಅನ್ವಯವಾಗುತ್ತವೆ ಹೊರತು ನಿರ್ದಿಷ್ಟ ಸಮುದಾಯಕ್ಕೆ ಅಲ್ಲ ಎಂದು ನ್ಯಾಯಮೂರ್ತಿಗಳಾದ ಬಿ ಆರ್ ಗವಾಯಿ ಮತ್ತು ಕೆ ವಿ ವಿಶ್ವನಾಥನ್ ಅವರನ್ನೊಳಗೊಂಡ ನ್ಯಾಯಪೀಠ ಹೇಳಿದೆ.

ಒಂದು ನಿರ್ದಿಷ್ಟ ಧರ್ಮಕ್ಕೆ ವಿಭಿನ್ನ ಕಾನೂನು ಇರಬಾರದು ಎಂದು ಗಮನಿಸಿದ ನ್ಯಾಯಪೀಠ, ಸಾರ್ವಜನಿಕ ರಸ್ತೆಗಳು, ಸರ್ಕಾರಿ ಭೂಮಿ ಅಥವಾ ಅರಣ್ಯಗಳಲ್ಲಿ ಯಾವುದೇ ಅನಧಿಕೃತ ನಿರ್ಮಾಣಗಳು ತಲೆಯೆತ್ತುವಂತಿಲ್ಲ ಮತ್ತು ಅವುಗಳನ್ನು ರಕ್ಷಿಸಲೂಬಾರದು ಎಂದು ಹೇಳಿದೆ.

ಸಾರ್ವಜನಿಕ ಸುರಕ್ಷತೆಯು ಅತ್ಯುನ್ನತವಾಗಿದೆ. ರಸ್ತೆ, ಜಲಮೂಲಗಳು ಅಥವಾ ರೈಲು ಹಳಿಗಳನ್ನು ಅತಿಕ್ರಮಿಸುವ ಯಾವುದೇ ಧಾರ್ಮಿಕ ರಚನೆಯನ್ನು ಸುಮ್ಮನೆ ಬಿಡಬಾರದು ಕೆಡವಿ ಹಾಕಬೇಕು ಎಂದು ಸುಪ್ರೀಂ ಕೋರ್ಟ್ ಮಹತ್ತರ ಆದೇಶ ನೀಡಿದೆ.

ಬುಲ್ಡೋಜರ್ ಕಾರ್ಯಾಚರಣೆ ಮತ್ತು ಅತಿಕ್ರಮಣ ವಿರೋಧಿ ಕಾರ್ಯಾಚರಣೆಗಳಿಗೆ ಕೋರ್ಟ್ ನಿರ್ದೇಶನಗಳು ಧರ್ಮವನ್ನು ಲೆಕ್ಕಿಸದೆ ಎಲ್ಲಾ ನಾಗರಿಕರಿಗೆ ಅನ್ವಯಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ. ನಮ್ಮ ಆದೇಶವು ಯಾವುದೇ ಸಾರ್ವಜನಿಕ ಸ್ಥಳಗಳನ್ನು ಅತಿಕ್ರಮಣದಾರರಿಗೆ ಸಹಾಯ ಮಾಡದಂತೆ ನೋಡಿಕೊಳ್ಳುವುದಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಸಾರ್ವಜನಿಕ ಸ್ಥಳಗಳಲ್ಲಿ ಧಾರ್ಮಿಕ ಕಟ್ಟಡ ನಿರ್ಮಾಣಗಳ ಕುರಿತ ಪ್ರಕರಣದ ವಿಚಾರಣೆ ನಡೆಯುತ್ತಿದೆ. ಹಲವಾರು ರಾಜ್ಯಗಳಲ್ಲಿ ಆಸ್ತಿಗಳನ್ನು ನೆಲಸಮ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿಗಳ ನಮೂನೆಗಳ ಮೇಲಿನ ವಾದವನ್ನು ಸುಪ್ರೀಂ ಕೋರ್ಟ್ ಆಲಿಸುತ್ತಿದೆ.

ಸೆಪ್ಟೆಂಬರ್ 17 ರಂದು ಸುಪ್ರೀಂ ಕೋರ್ಟ್, ತನ್ನ ಅನುಮತಿಯಿಲ್ಲದೆ ಅಕ್ಟೋಬರ್ 1 ರವರೆಗೆ ಧಾರ್ಮಿಕ ಕಟ್ಟಡಗಳನ್ನು ನೆಲಸಮ ಮಾಡಲಾಗುವುದಿಲ್ಲ ಎಂದು ಹೇಳಿತ್ತು. ಅಕ್ರಮ ಉರುಳಿಸುವಿಕೆಯ ನಿದರ್ಶನವೂ ಸಂವಿಧಾನದ ತತ್ವಕ್ಕೆ ವಿರುದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

No Comments

Leave A Comment