ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಜನವರಿ 29ರಿ೦ದ 125 ದಿನಗಳಕಾಲ ನಿರ೦ತರ ಅಹೋರಾತ್ರೆ ಭಜನಾ ಕಾರ್ಯಕ್ರಮವು ಜರಗಲಿದೆ. ಭಜನಾ ಕಾರ್ಯಕ್ರಮವನ್ನು ಕಾಶೀಮಠ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ದೀಪಪ್ರಜ್ವಲನೆ ಮಾಡುವುದರೊ೦ದಿಗೆ ಭಜನಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಬೆಂಗಳೂರು: ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪಡಿತರ ಚೀಚಿ ವಿತರಣಾ ಮಾನದಂತ ಪರಿಶೀಲನೆಗೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಮತ್ತು ಅಭಿವೃದ್ಧಿ ಆಯುಕ್ತರ ನೇತೃತ್ವದಲ್ಲಿ ಉಪ ಸಮಿತಿಯನ್ನು ರಚನೆ ಮಾಡಿದೆ.
ಈ ಕುರಿತು ವಿಕಾಸಸೌಧದಲ್ಲಿ ಸೋಮವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆಯೋಗದ ಅಧ್ಯಕ್ಷ ಮತ್ತು ಮಾಜಿ ಸಚಿವ ಆರ್.ವಿ.ದೇಶಪಾಂಡೆ ಅವರು, ಬಿಪಿಎಲ್ ಪಡಿತರ ಚೀಟಿ ದುರ್ಬಳಕೆಗೆ ಕಡಿವಾಣ, ಸರ್ಕಾರದ ಬೊಕಸಕ್ಕೆ ಅನಗತ್ಯ ವೆಚ್ಚ ತಗ್ಗಿಸುವುದು, ಅರ್ಹರಿಗೆ ಈ ಸೌಲಭ್ಯ ಒದಗಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ರಾಜ್ಯ ಸರ್ಕಾರದ ಯೋಜನೆಗಳ ಬಗ್ಗೆ ಪರಿಶೀಲನೆ ಮತ್ತು ಸಲಹೆಗಳನ್ನು ಪ್ರಸ್ತಾಪಿಸುವ ಕಾರ್ಯವನ್ನು ಉಪಸಮಿತಿಗೆ ವಹಿಸಲಾಗಿದೆ ಎಂದು ಹೇಳಿದರು.
ಕೆಲವು ಇಲಾಖೆಗಳು ನಿಗಮ– ಮಂಡಳಿಗಳನ್ನು ವಿಲೀನಗೊಳಿಸುವ ಸಾಧ್ಯತೆಯನ್ನು ಪರಿಶೀಲಿಸಲಾಗುತ್ತಿದೆ. 160 ನಿಗಮ-ಮಂಡಳಿಗಳ ಪೈಕಿ 53 ಮಾತ್ರ ಆರ್ಥಿಕವಾಗಿ ಲಾಭದಲ್ಲಿವೆ. ಉಳಿದ 107 ನಿಗಮ-ಮಂಡಳಿಗಳಿಗೆ ಬಲವರ್ಧನೆ ಅಥವಾ ವಿಲೀನದಂತಹ ಕ್ರಮದ ಅಗತ್ಯವಿದೆ. ಆರ್ಥಿಕವಾಗಿ ಬಲಪಡಿಸಿ ಲಾಭದ ಹಳಿಗೆ ತರಬಹುದಾದ ನಿಗಮ– ಮಂಡಳಿಗಳನ್ನು ಗುರುತಿಸಿ ಬಲವರ್ಧನೆಗೆ ಕೈಗೊಳ್ಳಬೇಕಾದ ಕ್ರಮಗಳು ಬೊಕ್ಕಸಕ್ಕೆ ಹೊರೆಯಾದ ನಿಗಮ-ಮಂಡಳಿಗಳ ವಿಲೀನದ ಕುರಿತು ಸಲಹೆ ನೀಡಲು ಚಿಂತನೆ ನಡೆದಿದೆ ಎಂದು ಹೇಳಿದರು.
ಆದಾಯ ತೆರಿಗೆ ಪಾವತಿದಾರರು, ಸರ್ಕಾರಿ ನೌಕರರು ಬಿಪಿಎಲ್ ಪಡಿತರ ಚೀಟಿ ಹೊಂದಿರುವ ದೂರುಗಳು ಇವೆ. ಬಿಪಿಎಲ್ ಪಡಿತರ ಚೀಟಿ ಮಾನದಂಡಗಳ ಜೊತೆಗೆ, ಸರ್ಕಾರದ ಪ್ರಾಯೋಜಿತ ಯೋಜನೆಗಳನ್ನೂ ಈ ಸಮಿತಿ ಪರಿಶೀಲಿಸಿ ಸಲಹೆಗಳನ್ನು ನೀಡಲಿದೆ.
ಆಡಳಿತದಲ್ಲಿ ಸುಧಾರಣೆ, ಸರಳೀಕರಣ, ನಾಗರಿಕ ಸೇವೆಗಳ ತ್ವರಿತ ವಿಲೇವಾರಿ ದೃಷ್ಟಿಯಿಂದ ಮುಖ್ಯಮಂತ್ರಿ, ಸಚಿವರು ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಜಿಲ್ಲೆಗಳಿಗೆ ಭೇಟಿ ನೀಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳೊಂದಿಗೆ ಸಭೆ, ಸಾರ್ವಜನಿಕರಿಂದಲೂ ಅಭಿಪ್ರಾಯ ಸಂಗ್ರಹಿಸಲಾಗಿದೆ. ಪ್ರಮುಖ ಇಲಾಖೆಗಳ ಕೆಳಹಂತದಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿ, ಕೆಲಸದ ಹೊರೆ ಹೆಚ್ಚಿರುವ ಜಿಲ್ಲೆಗಳಿಗೆ ಮರು ನಿಯೋಜನೆ, ಅನಗತ್ಯವೆಂದು ಪರಿಗಣಿಸಲಾಗಿರುವ ಲಿಪಿಕ ಹುದ್ದೆಗಳನ್ನು ತಾಂತ್ರಿಕ ಹುದ್ದೆಗಳಾಗಿ ಪರಿವರ್ತಿಸಲು ಸಲಹೆ ನೀಡಲಾಗಿದೆ ಎಂದು ತಿಳಿಸಿದರು.
ಕಚೇರಿಗಳಿಗೆ ಜನರ ಅಲೆದಾಟ ತಪ್ಪಿಸಲು ಮತ್ತು ದಕ್ಷತೆ ಹೆಚ್ಚಿಸಲು 19 ಇಲಾಖೆಗಳಿಗೆ ಸಂಬಂಧಿಸಿದ 2,871 ಶಿಫಾರಸುಗಳನ್ನು ಆಯೋಗ ಮಾಡಿದೆ. ಅವುಗಳಲ್ಲಿ 853 ಶಿಫಾರಸುಗಳನ್ನು ಸರ್ಕಾರ ಅನುಷ್ಠಾನಕ್ಕೆ ತಂದಿದೆ. ಇನ್ನು ಅನುಷ್ಠಾನದ ಹಂತದಲ್ಲಿ 592 ಶಿಫಾರಸುಗಳಿದ್ದು, ಸರಕಾರದ ಮಟ್ಟದಲ್ಲಿ 243, ಇಲಾಖಾ ಮಟ್ಟದಲ್ಲಿ 1181 ಶಿಫಾರಸುಗಳು ಬಾಕಿ ಇವೆ. ಈ ಶಿಫಾರಸುಗಳನ್ನು ತಿಂಗಳೊಳಗೆ ಅನುಷ್ಠಾನಕ್ಕೆ ತರಲು ನಿರ್ದೇಶನ ನೀಡಲಾಗಿದೆ ಎಂದರು.
2024ರ ಜನವರಿ ಅಂತ್ಯದ ವೇಳೆಗೆ ಆಯೋಗ 39 ಇಲಾಖೆಗಳನ್ನು ಒಳಗೊಂಡು ಒಟ್ಟು 7 ವರದಿಗಳನ್ನು ಸರಕಾರಗಳಿಗೆ ನೀಡಿದೆ. ಈ ವರದಿಗಳು 5039 ಶಿಫಾರಸುಗಳನ್ನು ಒಳಗೊಂಡಿತು. ಜನವರಿ ಅಂತ್ಯದವರೆಗೆ ಕೇವಲ 99 ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲಾಗಿತ್ತು. ನಿರಂತರವಾಗಿ ಸರಕಾರದ ಮುಖ್ಯ ಕಾರ್ಯದರ್ಶಿ, ಹೆಚ್ಚುವರಿ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ ಹಾಗೂ ಇತರರಿಗೆ ನಿರಂತರವಾಗಿ ಪತ್ರ ಬರೆದು ಹೆಚ್ಚು ಶಿಫಾರಸುಗಳನ್ನು ಅನುಷ್ಠಾನಗೊಳಿಸಲಾಗಿದೆ ಎಂದು ಹೇಳಿದರು.